ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ದುರ್ಮರಣ: ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ದುರ್ಘಟನೆ

CTD Accident
Published on

ಚಿತ್ರದುರ್ಗ: ನಿಂತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ದುರಂತ ಸಾವಿಗೀಡಾಗಿರುವ ಘಟನೆ ಚಿತ್ರದುರ್ಗದ ಮಲ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಇಂದು (ಸೆ.04) ಬೆಳಗ್ಗೆ ನಡೆದಿದೆ.

ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರು ನಿಂತಿದ್ದ ಲಾರಿಗೆ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ.

ಘಟನೆಯಲ್ಲಿ ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳೀಯ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.

ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net