ಮಾರುಕಟ್ಟೆಯಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ, ನಾಲ್ವರ ಸಜೀವ ದಹನ

fire at UP
Published on

ಝಾನ್ಸಿ: ಮಾರುಕಟ್ಟೆಯ ಕಟ್ಟಡವೊಂದರಲ್ಲಿ ಏಕಾ-ಏಕಿ ಬೆಂಕಿ ಕಾಣಿಸಿಕೊಂಡು ಓರ್ವ ಮಹಿಳೆ ಸೇರಿದಂತೆ ನಾಲ್ವರು ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಶೋರೂಮ್​ವೊಂದರಲ್ಲಿ ನಡೆದಿದೆ.

ಘಟನೆಯಲ್ಲಿ ಮೃತಪಟ್ಟವರ ಗುರುತು ಇನ್ನು ಪತ್ತೆಯಾಗಿಲ್ಲ. ಸಿಪ್ರಿ ಬಜಾರ್‌ನ ವಿಆರ್ ಟ್ರೇಡರ್ಸ್​ನಲ್ಲಿ ಎಲೆಕ್ಟ್ರಾನಿಕ್ ವಸ್ತುಗಳ ಶೋ ರೂಮ್​ನ ಮೊದಲ ಮಹಡಿಯಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದೆ. ಸ್ವಲ್ಪ ಸಮಯದಲ್ಲೇ ಬೆಂಕಿಯು ತೀವ್ರ ಸ್ವರೂಪವನ್ನು ಪಡೆದುಕೊಂಡಿದ್ದು, ಎಸಿ, ಟಿವಿ, ಫ್ರಿಡ್ಜ್, ಮೊಬೈಲ್ ಸೇರಿದಂತೆ ಎಲ್ಲ ಎಲೆಕ್ಟ್ರಾನಿಕ್ ಉಪಕರಣಗಳು ಸುಟ್ಟು ಭಸ್ಮವಾಗಿವೆ. ನಂತರ ಬೆಂಕಿಯು ಎರಡನೇ ಮಹಡಿಯನ್ನು ತಲುಪಿ ಕಾಲ್ತುಳಿತ ಉಂಟಾಗಿದೆ.

ಈ ವೇಳೆ ಕೆಲವರು ಪ್ರಾಣ ಉಳಿಸಿಕೊಳ್ಳಲು ಎರಡನೇ ಮಹಡಿಯಿಂದ ಜಿಗಿದಿದ್ದಾರೆ. ಇದರ ಪರಿಣಾಮವಾಗಿ ಇಬ್ಬರು ಗಾಯಗೊಂಡಿದ್ದಾರೆ. ನಂತರ ಮೂರನೇ ಮಹಡಿಯಲ್ಲಿರುವ ಯುನೈಟೆಡ್ ಇನ್ಶೂರೆನ್ಸ್ ಕಂಪನಿಯ ಕಚೇರಿಗೆ ಬೆಂಕಿ ತಗುಲಿದ್ದು,. ಈ ಕಚೇರಿಯೂ ಬೆಂಕಿಗೆ ಆಹುತಿಯಾಗಿದೆ.

ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು, ಅಗ್ನಿಶಾಮಕ ದಳ ಸುಮಾರು 10 ಗಂಟೆಗಳ ಕಾಲ ರಕ್ಷಣಾ ಕಾರ್ಯಾಚರಣೆ ನಡೆಸಿ ಸತ್ತವರ ಮೃತದೇಹ ಹೊರತೆಗೆದಿದ್ದಾರೆ. ಝಾನ್ಸಿ ಜಿಲ್ಲಾಧಿಕಾರಿ ರವೀಂದ್ರ ಕುಮಾರ್ ಈ ಕುರಿತು ತನಿಖೆಗೆ ಆದೇಶಿಸಿದ್ದಾರೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net