

Building Collapse: ಸರ್ಕಾರಿ ಶಾಲಾ ಕಟ್ಟಡ ಕುಸಿದ ಹಿನ್ನೆಲೆ ನಾಲ್ವರು ಮಕ್ಕಳು ಮೃತಪಟ್ಟಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.ರಾಜಸ್ಥಾನದ ಝಲಾವರ್ ಜಿಲ್ಲೆಯಲ್ಲಿ ಶುಕ್ರವಾರ ಈ ಘಟನೆ ಸಂಭವಿಸಿದೆ.
ಮನೋಹರ್ ಥಾಣೆಯ ಪಿಪ್ಲೋಡಿ ಸರ್ಕಾರಿ ಶಾಲೆಯಲ್ಲಿ ಬೆಳಿಗ್ಗೆ 8.30ರ ಸುಮಾರಿಗೆ ಈ ಘಟನೆ ನಡೆದಿದೆ. ಒಂದೇ ಅಂತಸ್ತಿನ ಕಟ್ಟಡ ಕುಸಿದಾಗ ಶಿಕ್ಷಕರು ಮತ್ತು ಸಿಬ್ಬಂದಿ ಸದಸ್ಯರಲ್ಲದೆ ಸುಮಾರು 40 ಮಕ್ಕಳು ಆವರಣದಲ್ಲಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆಗಾಗಿ ಜಿಲ್ಲಾಡಳಿತ ಮತ್ತು ವಿಪತ್ತು ಪರಿಹಾರ ತಂಡಗಳ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.(ಏಜೆನ್ಸೀಸ್)