

ಲಖನೌ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಐವರು ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಹರ್ದೋಯಿಯಲ್ಲಿ ನಡೆದಿದೆ.
ಸೋಮವಾರ ತಡರಾತ್ರಿ ಬಿಲಹೌರ್-ಕತ್ರಾ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಸಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಹರ್ದೋಯಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದುರ್ಗೇಶ್ ಕುಮಾರ್ ಸಿಂಗ್, ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಹರ್ದೋಯಿಯ ಬರಕಾಂತ್ ಗ್ರಾಮದಿಂದ ನಾಯಗಾಂವ್ ಕಡೆಗೆ ಹೋಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ.
ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ಧಾರೆ. ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹರ್ದೋಯಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದುರ್ಗೇಶ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.