

ಹೈದರಾಬಾದ್: ನಾಲ್ಕು ವರ್ಷದ ಬಾಲಕನೊಬ್ಬ ಬೀದಿನಾಯಿಗಳ ದಾಳಿಗೆ ಬಲಿಯಾದ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.
ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದ ಸ್ವಲ್ಪ ಸಮಯದಲ್ಲೇ ಮೃತಪಟ್ಟಿದ್ದಾನೆಂದು ವೈದ್ಯರು ಹೇಳಿದ್ದಾರೆ.
ಈ ಭೀಕರ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೀದಿ ನಾಯಿಗಳ ಗುಂಪೊಂದು ಬಾಲಕನ ಮೇಲೆ ದಾಳಿ ಮಾಡಿದಾಗ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ. ಅಳುವನ್ನು ಕೇಳಿದ ತಂದೆ ಸ್ಥಳಕ್ಕೆ ಧಾವಿಸಿ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ದರು. ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಬಾಲಕ ಸಾವನ್ನಪ್ಪಿದ್ದ ಎಂದು ವರದಿಯಾಗಿದೆ. ಈ ಘಟನೆ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.