ಕೋವಿಡ್ 40 ಹೊಸ ಸೋಂಕು ಪ್ರಕರಣಗಳು ವರದಿ

Covid
Published on

ಬೆಂಗಳೂರು: ರಾಜ್ಯದಲ್ಲಿ ಬುಧವಾರ 40 ಕೋವಿಡ್ ಹೊಸ ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 126 ತಲುಪಿದೆ. ಇದರೊಂದಿಗೆ ಈವರೆಗೂ 211 ಮಂದಿ ಕೋವಿಡ್ ನಿಂದ ಬಳಲಿದ್ದು, 84 ಮಂದಿ ಚೇತರಿಸಿಕೊಂಡಿದ್ದಾರೆ.

ಕೋವಿಡ್ ವೈರಾಣು ಪತ್ತೆ ಸಂಬಂಧ ಕಳೆದ 24 ಗಂಟೆಗಳಲ್ಲಿ 344 ಆರ್‌ಟಿ ಪಿಸಿಆರ್ ಸೇರಿ 395 ಮಾದರಿಗಳ ಪರೀಕ್ಷೆ ನಡೆಸಲಾಗಿದ್ದು, ಸೋಂಕು ದೃಢ ಪ್ರಮಾಣ ಶೇ. 10.12 ವರದಿಯಾಗಿದೆ. ಸಕ್ರಿಯ ಪ್ರಕರಣಗಳಲ್ಲಿ 124 ಮಂದಿ ಮನೆ ಆರೈಕೆಯಲ್ಲಿದ್ದಾರೆ. ಉಳಿದಂತೆ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net