

ನವದೆಹಲಿ: ಭಾರತದೊಂದಿಗಿನ ಗಲ್ವಾನ್ ರಕ್ತಸಿಕ್ತ ಘರ್ಷಣೆಯಲ್ಲಿ ನಮ್ಮ ಕಡೆ 40 ಯೋಧರು ಸತ್ತಿಲ್ಲ. ಇದೊಂದು ಸುಳ್ಳು ಸುದ್ದಿ ಎಂದು ಚೀನಾ ಹೇಳಿಕೊಂಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಚೀನಾದ ವಿದೇಶಾಂಗ ಸಚಿವಾಲಯದ ಅಧಿಕಾರಿಗಳು, ನಮ್ಮ ಕಮಾಂಡಿಂಗ್ ಆಫೀಸರ್ ಸೇರಿ ಇಬ್ಬರು ಮೃತಪಟ್ಟಿರುವುದಾಗಿ ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: ಸೇನೆ ಹಿಂತೆಗೆಯಬೇಕು: ಉಭಯ ರಾಷ್ಟ್ರಗಳ ಒಮ್ಮತಾಭಿಪ್ರಾಯ
ಈ ಘರ್ಷಣೆಯಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದು, ಚೀನಾದ 40ಕ್ಕೂ ಹೆಚ್ಚು ಯೋಧರು ಹತರಾಗಿರುವುದಾಗಿ ಭಾರತ ಹೇಳಿತ್ತು. ಆದರೆ, ಈ ವರದಿಯನ್ನು ಚೀನಾ ಇದೀಗ ತಳ್ಳಿಹಾಕಿದೆ.
ಗಡಿ ಭಾಗದಲ್ಲಿ ಉಂಟಾಗಿರುವ ಬಿಕ್ಕಟ್ಟು ಮತ್ತು ಉದ್ವಿಗ್ನತೆ ಶಮನಕ್ಕೆ ಭಾರತ ಮತ್ತು ಚೀನಾ ಮಾತುಕತೆ ನಡೆಸುತ್ತಿವೆ. ಇದನ್ನು ಮಾತುಕತೆಯ ಮೂಲಕವೇ ಪರಿಹರಿಸಿಕೊಳ್ಳಲು ಉಭಯ ರಾಷ್ಟ್ರಗಳು ಸಮ್ಮತಿಸಿವೆ ಎಂದು ಚೀನಾದ ವಿದೇಶಾಂಗ ಸಚಿವಾಲಯ ಹೇಳಿದೆ.