

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನ ಭೇಟಿ ಮಾಡಲು ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಲು 40ಕ್ಕೂ ಹೆಚ್ಚು ಸ್ವಾಮೀಜಿಗಳು ಸಿಎಂ ನಿವಾಸ ಕಾವೇರಿಗೆ ಆಗಮಿಸಿದ್ದರು.
ಇಂದು(ಮಂಗಳವಾರ) ಸಂಜೆ 4 ಗಂಟೆಗೆ ಸಿಎಂ ನಿವಾಸದಲ್ಲಿ ಬಿಎಸ್ವೈ ಅವರ ಭೇಟಿಗೆ ವಿಜಯಪುರ ಜಿಲ್ಲೆ ಭಾಗದ ಸ್ವಾಮೀಜಿಗಳ ನಿಯೋಗ ಮೂರು ಟಿಟಿ ವಾಹನದಲ್ಲಿ ಬೆಂಗಳೂರಿಗೆ ಬಂದಿತ್ತು.
ವಿಜಯಪುರ ಜಿಲ್ಲೆಯನ್ನು ಸಮಗ್ರ ನೀರಾವರಿಗೆ ಒಳಪಡಿಸಬೇಕು. ವೀರಶೈವ ಲಿಂಗಾಯತ ಸಮುದಾಯದ ಒಳಪಂಗಡಗಳಿಗೆ ಮೀಸಲಾತಿ ಸೌಲಭ್ಯ ಕಲ್ಪಿಸಿ, 106 ಒಳಪಂಗಡಗಳು ಲಿಂಗಾಯತರಲ್ಲಿವೆ, 32 ಒಳಪಂಗಡಗಳು ಒಬಿಸಿಯಡಿ ಸೇರಿವೆ. ಉಳಿದ 74 ಒಳಪಂಗಡಗಳನ್ನ ಮೀಸಲಾತಿಗೆ ಸೇರಿಸಬೇಕು ಎಂದು ಸಿಎಂಗೆ ಸ್ವಾಮೀಜಿಗಳ ನಿಯೋಗ ಮನವಿ ಸಲ್ಲಿಸಿತು.