೪೦೦೦ ಕೆ.ಜಿ ಶ್ರೀಗಂಧ ಮರದ ತುಂಡುಗಳು ಜಪ್ತಿ

Arrest
Published on

ಬೆಂಗಳೂರು: ಗೋದಾಮಿನಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ೪೦೦೦ ಕೆ.ಜಿ, ಶ್ರೀಗಂಧ ಮರದ ತುಂಡುಗಳನ್ನು ಅರಣ್ಯಾಧಿಕಾರಿಗಳು ಜಪ್ತಿ ಮಾಡಿದ್ದಾರೆ.
ದೂರವಾಣಿ ನಗರದಲ್ಲಿರುವ ಐಟಿಐ ಲಿ.ಕಾರ್ಖಾನೆಯ ಗೋದಾಮಿನಲ್ಲಿ ಲಕ್ಷಾಂತರ ರೂ. ಬೆಲೆ ಬಾಳುವ ಶ್ರೀಗಂಧ ಮರದ ತುಂಡುಗಳನ್ನು ದಾಸ್ತಾನು ಮಾಡಲಾಗಿದೆ ಎಂದು ದೊರೆತ ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಅಧಿಕಾರಿ ಮತ್ತು ಸಿಬ್ಬಂದಿ ತಂಡ ಅಂದಾಜು ೪೦೦೦ ಕೆ.ಜಿ ಶ್ರೀಗಂಧದ ಮರದ ತುಂಡುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ. ಜತೆಗೆ ಕಾರ್ಖಾನೆಯನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು ನಗರ ಡಿಸಿಎಫ್ ಅವರ ಮಾರ್ಗದರ್ಶನದಲ್ಲಿ ರಾಜ್ಯ ಅಪರಾಧ ನಿಯಂತ್ರಣ ಕೋಶ (ಜಾಗೃತ) ಹಾಗು ಕೆ.ಆರ್ ಪುರ ವಲಯದ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಆರ್‌ಎಫ್‌ಒ ರಘು ಹಾಗೂ ಅಮೃತ್ ಏ. ದೇಸಾಯಿ, ಸಿದ್ದರಾಜು ಟಿ , ಅಶ್ವಿನ್ ಎಂ.ಜೆ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net