ಹೂಡಿಕೆ ನೆಪದಲ್ಲಿ 43 ಲಕ್ಷ ಧೋಖಾ

Mumbai man
Published on

ಬೆಂಗಳೂರು: ಬ್ಲಾಕ್ ಟ್ರೇಡಿಂಗ್ ಮತ್ತು ಷೇರು ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಸಿಗಲಿದೆ ಎಂದು ಆಮಿಷವೊಡ್ಡಿ 43.23 ಲಕ್ಷ ರೂ. ಹೂಡಿಕೆ ಮಾಡಿಸಿಕೊಂಡು ಸೈಬರ್ ಕಳ್ಳರು ವಂಚಿಸಿದ್ದಾರೆ.

ಈ ಕುರಿತು ಶೇಷಾದ್ರಿಪುರದಲ್ಲಿ ನೆಲೆಸಿರುವ ಮಹಿಳಾ ಅಧಿಕಾರಿ, ಕೇಂದ್ರ ಸಿಇಎನ್ ಠಾಣೆಗೆ ದೂರು ಸಲ್ಲಿಸಿದ್ದಾರೆ. 2024ರ ಅಕ್ಟೋಬರ್‌ನಲ್ಲಿ ೇಸ್‌ಬುಕ್ ಜಾಹೀರಾತು ನಂಬಿ ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ ವಾಟ್ಸ್‌ಆ್ಯಪ್ ಗ್ರೂಪ್‌ಗೆ ಮೊಬೈಲ್ ನಂಬರ್ ಸೇರ್ಪಡೆ ಆಯಿತು. ಅದರಲ್ಲಿ ಐಶ್ವರ್ಯಾ ಶಾಸಿ ಎಂಬಾಕೆ ಕರೆ ಮಾಡಿ, ಟ್ರೇಡಿಂಗ್‌ನಲ್ಲಿ ಹೂಡಿಕೆ ಮಾಡಿದರೆ ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭಾಂಶ ಸಿಗಲಿದೆ ಎಂದು ನಂಬಿಸಿದ್ದಳು.

ಆಕೆ ಮಾತು ನಂಬಿ ಹಂತ ಹಂತವಾಗಿ ವಿವಿಧ ಬ್ಯಾಂಕ್ ಖಾತೆಗಳಿಗೆ 43.23 ಲಕ್ಷ ರೂ. ಹೂಡಿಕೆ ಮಾಡಿದೆ. ಆದರೆ, ಲಾಭಾಂಶ ವಿತ್‌ಡ್ರಾ ಮಾಡಲು ಪ್ರಯತ್ನ ಮಾಡಿದಾಗ ಸಾಧ್ಯವಾಗಿಲ್ಲ. ಮೊಬೈಲ್ ನಂಬರ್‌ಗಳಿಗೆ ಕರೆ ಮಾಡಿದಾಗ ಸ್ವಿಚ್ ಆ್ ಆಗಿದ್ದವು. ವಂಚನೆ ಮಾಡುವ ಉದ್ದೇಶಕ್ಕೆ ಹಣ ಹೂಡಿಕೆ ಮಾಡಿಸಿಕೊಂಡು ಮೋಸ ಮಾಡಿದ್ದಾರೆ ಎಂದು ಮಹಿಳಾ ಅಧಿಕಾರಿ, ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net