ಜಿಎಸ್​ಟಿ ಸಭೆ ಮೇಲಿದೆ ದೇಶದ ಆರ್ಥಿಕ ವಲಯದ ಗಮನ; ವಿತ್ತ ಸಚಿವರ ಅಧ್ಯಕ್ಷತೆ, ಸಿಎಂ ಬೊಮ್ಮಾಯಿಯೂ ಭಾಗಿ..

GST Meeting
ಚಂಡೀಗಢದಲ್ಲಿ ನಡೆಯುತ್ತಿರುವ ಜಿಎಸ್​ಟಿ ಮಂಡಳಿ ಸಭೆಯಲ್ಲಿ ಜಿಎಸ್​ಟಿ ಸುಧಾರಣಾ ಸಮಿತಿ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವರದಿ ಮಂಡಿಸಿದರು. ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ಸಿ. ಶಿಖಾ ಇತರರಿದ್ದರು.
Published on

ನವದೆಹಲಿ: ದೇಶದ ಆರ್ಥಿಕತೆಯ ದಿಕ್ಕನ್ನು ನಿರ್ಧರಿಸುವಂಥ ಮಹತ್ವದ ಸಭೆಯೊಂದು ಆರಂಭಗೊಂಡಿದ್ದು, ಭಾರತದ ಆರ್ಥಿಕ ವಲಯದ ಗಮನ ಈ ಸಭೆಯ ಮೇಲಿದ್ದು, ಆರ್ಥಿಕ ಪರಿಣತರು ಮತ್ತು ಉದ್ಯಮ ಕ್ಷೇತ್ರದ ಮಂದಿ ಇದರ ನಿರ್ಣಯಗಳತ್ತ ಕುತೂಹಲಭರಿತ ನಿರೀಕ್ಷೆ ಹೊಂದಿದ್ದಾರೆ.

ಹೌದು.. ಸರಕು ಮತ್ತು ಸೇವಾ ತೆರಿಗೆ ಪದ್ಧತಿಯಲ್ಲಿ (ಜಿಎಸ್​ಟಿ) ಮಹತ್ವದ ಬದಲಾವಣೆಗಳನ್ನು ತರಲಿದೆ ಎಂದು ನಿರೀಕ್ಷಿಸಲಾಗಿರುವ ಜಿಎಸ್​ಟಿ ಮಂಡಳಿಯ 47ನೇ ಸಭೆ ಚಂಡೀಗಢದಲ್ಲಿ ಇಂದು ಆರಂಭಗೊಂಡಿದ್ದು, ನಾಳೆಯೂ ನಡೆಯಲಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಂಡಿದ್ದು, ಕರ್ನಾಟಕದಿಂದ ಬಸವರಾಜ ಬೊಮ್ಮಾಯಿ ಕೂಡ ಭಾಗಿಯಾಗಿದ್ದಾರೆ.

ರಾಜ್ಯಗಳಿಗೆ ತೆರಿಗೆ ಸಂಗ್ರಹದಲ್ಲಾಗುತ್ತಿರುವ ಕೊರತೆಗೆ ಪರಿಹಾರ ನೀಡಿಕೆ ನಿರ್ಧಾರವನ್ನು ಈ ಸಭೆಯಲ್ಲಿ ಕೈಗೊಳ್ಳುವ ಸಾಧ್ಯತೆ ಇದೆ. ಅಲ್ಲದೆ ಕೆಲವು ವಸ್ತುಗಳ ತೆರಿಗೆ ಏರಿಕೆ ಹಾಗೂ ತೆರಿಗೆ ಸ್ಲ್ಯಾಬ್​ಗಳ ವಿಲೀನದ ಬಗ್ಗೆ ನಿರ್ಣಯವಾಗುವ ಸಾಧ್ಯತೆಯೂ ಇದೆ ಎಂದು ನಿರೀಕ್ಷಿಸಲಾಗಿದೆ.

ಚಂಡೀಗಢದಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ಸಿ. ಶಿಖಾ ಮತ್ತು ಇತರರು ಉಪಸ್ಥಿತರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net