4ರಂದುನೀಟ್‌ಪರೀಕ್ಷೆ, 3013 ವಿದ್ಯಾರ್ಥಿಗಳ ನೋಂದಣಿ

CTD DC T. venktesh..............
Published on

ಚಿತ್ರದುರ್ಗ: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯಿಂದ ಮೇ 4ರಂದು ನಡೆಯಲಿರುವ ನೀಟ್ ಪರೀಕ್ಷೆಗೆ ಜಿಲ್ಲೆಯಲ್ಲಿ 3013 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 6 ಪರೀಕ್ಷಾ ಕೇಂದ್ರಗಳಲ್ಲಿ ಅಂದು ಮಧ್ಯಾಹ್ನ 2ರಿಂದ ಸಂಜೆ 5ರವರೆಗೆ ಪರೀಕ್ಷೆ ಜರುಗಲಿದೆ. ಚಿತ್ರದುರ್ಗ ನಗರದ ಸರ್ಕಾರಿ ಬಾಲಕರ ಹಾಗೂ ಬಾಲಕಿಯರ ಪದವಿ ಪೂರ್ವ ಕಾಲೇಜು, ಸರ್ಕಾರಿ ಕಲಾ ಹಾಗೂ ವಿಜ್ಞಾನ ಕಾಲೇಜು, ಚಳ್ಳಕೆರೆ ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಬಸ್ ವ್ಯವಸ್ಥೆ, ಪರೀಕ್ಷಾ ಕೇಂದ್ರದಲ್ಲಿ ಅಂಗವಿಕಲರಿಗೆ ಸಾಧನ ಸಲಕರಣೆ ವ್ಯವಸ್ಥೆ ಕಲ್ಪಿಸಲಾಗಿದೆ. ಆರೋಗ್ಯ ಸಿಬ್ಬಂದಿ ಇರುತ್ತಾರೆ ಎಂದು ಡಿಸಿ ಟಿ.ವೆಂಕಟೇಶ್ ತಿಳಿಸಿದ್ದಾರೆ. ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

----------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net