

ಅಸ್ಸಾಂ; ಇಂದು (ಸೆ.14) ಸಂಜೆ ಅಸ್ಸಾಂನಲ್ಲಿ 5.9 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಹಲವಾರು ಜಿಲ್ಲೆಗಳಲ್ಲಿ ಭೀತಿ ಉಂಟಾಗಿದೆ. ತಕ್ಷಣಕ್ಕೆ ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ವರದಿಯಾಗಿಲ್ಲ ಎಂದು ಅಸ್ಸಾಂ ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 5.9 ರಷ್ಟಿದ್ದು, ಉದಲ್ಗುರಿಯಿಂದ ಪೂರ್ವಕ್ಕೆ 14 ಕಿ.ಮೀ ದೂರದಲ್ಲಿ ಕೇಂದ್ರಬಿಂದುವಾಗಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಭೂಕಂಪದ ಕೇಂದ್ರಬಿಂದು ಗುವಾಹಟಿಯಿಂದ 89 ಕಿಲೋಮೀಟರ್ ಮತ್ತು ಸೋನಿತ್‌ಪುರ ಜಿಲ್ಲೆಯ ಧೇಕಿಯಾಜುಲಿ ಪಟ್ಟಣದಿಂದ 16 ಕಿಲೋಮೀಟರ್ ದೂರದಲ್ಲಿದೆ ಎಂದು ಹೇಳಲಾಗಿದೆ. ಗೋಹ್ಪುರ್ ಮತ್ತು ಧೇಕಿಯಾಜುಲಿಯಲ್ಲಿ ಗೋಡೆಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು, ಮನೆಯ ಮೇಲ್ಛಾವಣಿ ಕುಸಿದಿದೆ. ಹಾಗೂ ನಲ್ಬರಿ ಜಿಲ್ಲೆಯಲ್ಲಿ ಮನೆಯ ನೆಲದಲ್ಲಿ ಬಿರುಕು ಕಾಣಿಸಿಕೊಂಡಿದೆ ಎನ್ನಲಾಗಿದೆ.
(ಏಜೆನ್ಸೀಸ್)