ದಾಖಲೆ ಇಲ್ಲದ 5.92 ಲಕ್ಷ ರೂ. ವಶ

29-GPT-5A
ಗುಂಡ್ಲುಪೇಟೆ ತಾಲೂಕಿನ ಕೇರಳ ಗಡಿಯ ಮದ್ದೂರು ಚೆಕ್ ಪೋಸ್ಟ್‌ನಲ್ಲಿ ಪೊಲೀಸರು ತಪಾಸಣೆ ತೀವ್ರಗೊಳಿಸಿದ್ದಾರೆ.
Published on

ಗುಂಡ್ಲುಪೇಟೆ : ತಾಲೂಕಿನ ಕೇರಳ ಹಾಗೂ ತಮಿಳುನಾಡು ಗಡಿಗಳ ಚೆಕ್ ಪೋಸ್ಟ್‌ಗಳಲ್ಲಿ ವಾಹನಗಳ ತಪಾಸಣೆ ತೀವ್ರಗೊಳಿಸಿದ ಪೊಲೀಸರು ದಾಖಲೆಗಳಿಲ್ಲದೆ ಸಾಗಣೆ ಮಾಡುತ್ತಿದ್ದ 4.98 ಲಕ್ಷ ರೂ.ವಶಕ್ಕೆ ಪಡೆದಿದ್ದಾರೆ. ಸರ್ಕಲ್ ಇನ್ಸ್‌ಪೆಕ್ಟರ್ ಪರಶಿವಮೂರ್ತಿ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ ತೀವ್ರ ತಪಾಸಣೆ ನಡೆಸಿದ ಪೊಲೀಸರು, ಕೇರಳದಿಂದ ಮದ್ದೂರು ಮಾರ್ಗವಾಗಿ ತಾಲೂಕಿನತ್ತ ಬರುತ್ತಿದ್ದ ಕಾರಿನಲ್ಲಿ 4.04 ಲಕ್ಷ ರೂ. ನಗದು ವಶಕ್ಕೆ ಪಡೆದುಕೊಂಡರು. ತಮಿಳುನಾಡಿನ ಕೆಕ್ಕನಹಳ್ಳ ಮಾರ್ಗವಾಗಿ ಬರುತ್ತಿದ್ದ ಕಾರಿನಲ್ಲಿದ್ದ ಸಬ್ ಇನ್‌ಸ್ಪೆಕ್ಟರ್ ದೊರೆರಾಜು 94 ಸಾವಿರ ರೂ. ನಗದು ವಶಕ್ಕೆ ಪಡೆದುಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net