

ನವದೆಹಲಿ: ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಮಹಿಳೆಗೆ ಎರಡು ಬೈಕ್ಗಳಲ್ಲಿ ಬಂದ ಐವರು ವ್ಯಕ್ತಿಗಳು ರಸ್ತೆಯಲ್ಲಿ ರಾತ್ರಿವೇಳೆ ಕಿರುಕುಳ ನೀಡಿರುವ ಘಟನೆ ಉತ್ತರಪ್ರದೇಶ ಆಗ್ರಾದಲ್ಲಿ ನಡೆದಿದೆ. ಸದ್ಯ 23 ಸೆಕೆಂಡ್ಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ನೆಟ್ಟಿಗರಿಂದ ಖಂಡನೆ ವ್ಯಕ್ತವಾಗಿದೆ.
ವೈರಲ್ ಆಗಿರುವ ವಿಡಿಯೋ ನೋಡಿ ಆ ಐವರ ವಿರುದ್ಧ ಕ್ರಿಮಿನಲ್ ಕ್ರಮ ತೆಗೆದುಕೊಳ್ಳಬೇಕು ಎಂದು ಕೆಲವರು ಹೇಳಿದ್ದಾರೆ. ರಾತ್ರಿ ವೇಳೆ ರಸ್ತೆಯಲ್ಲಿ ಮಹಿಳೆ ಜತೆ ಈ ವರ್ತಿಸುತ್ತಿದ್ದರು ಅಲ್ಲಿರುವ ಯಾರು ಏಕೆ ತಡೆಯಲಿಲ್ಲ ಎಂದು ಮತ್ತೆ ಕೆಲವರು ಪ್ರಶ್ನಿಸಿದ್ದಾರೆ. ವೈರಲ್ ಆದ ವಿಡಿಯೋದಲ್ಲಿ ಒಂದು ಬೈಕ್ನಲ್ಲಿ ಮೂವರು ವ್ಯಕ್ತಿಗಳು ಹಾಗೂ ಮತ್ತೊಂದು ಬೈಕ್ನಲ್ಲಿ ಇಬ್ಬರು ಇದ್ದಾರೆ. ಮಹಿಳೆಯು ಹೋಗುತ್ತಿದ್ದ ದ್ವಿಚಕ್ರ ವಾಹನದ ಹಿಂದೆ ಹಿಂಬಾಲಿಸಿದ ಅವರು ಎರಡೂ ಬದಿಯಿಂದ ಅಡ್ಡಗಟ್ಟಲು ಪ್ರಯತ್ನಿಸುತ್ತಿರುವುದು ಹಾಗೂ ಇನ್ನೊಬ್ಬ ವ್ಯಕ್ತಿ ಆಕೆಯನ್ನು ಹಿಂಬದಿಯಿಂದ ಮುಟ್ಟಲು ಪ್ರಯುತ್ನಿಸುತ್ತಿರುವುದನ್ನು ಕಾಣಬಹುದಾಗಿದೆ. ಅಲ್ಲದೆ ಮತ್ತೊಬ್ಬ ಆಕೆಯನ್ನು ತಳ್ಳಲು ಯತ್ನಿಸಿದ್ದಾನೆ.
ವಿಡಿಯೋ ವೈರಲ್ ಆಗುತ್ತಿದ್ದಂತೆ ಉತ್ತರಪ್ರದೇಶ ಪೊಲೀಸರು ಆಗ್ರಾ ಪೊಲೀಸರಿಗೆ ಈ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. ಆರಂಭದಲ್ಲಿ ಆ ವಿಡಿಯೋ ಆಗ್ರಾದಿಂದ ಬಂದಿದೆಯೇ ಎಂಬುದು ಸ್ಪಷ್ಟವಾಗಿಲ್ಲ, ಏಕೆಂದರೆ ವಿಡಿಯೋ ಸ್ಥಳವನ್ನು ಗುರುತಿಸುವುದು ಗೊಂದಲವಾಯಿತು. ಬಳಿಕ ಪೊಲೀಸರು ಆರೋಪಿಗಳನ್ನು ಬಂಧಿಸಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ ಮಾಡಿದರು.
ಇಬ್ಬರು ಆರೋಪಿಗಳಾದ ಯೂಸುಫ್ ಮತ್ತು ಫಿರೋಜ್ನನ್ನು ಬಂಧಿಸಲಾಗಿದ್ದು, ಉಳಿದ ಮೂವರಿಗಾಗಿ ಶೋಧ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.(ಏಜೆನ್ಸೀಸ್)