

ಕೊಡಗು : ಕೊಡಗಿನಲ್ಲಿ ಕೋವಿಡ್ ಪ್ರಕರಣ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ವಾರದಲ್ಲಿ ಎರಡು ದಿನ ಮಾತ್ರ ಅಗತ್ಯ ಸಾಮಾಗ್ರಿ ಖರೀದಿಗೆ ಅವಕಾಶ ದೊರೆಯಲಿದೆ. ಉಳಿದಂತೆ ಐದು ದಿನ ಸಂಪೂರ್ಣ ಲಾಕ್ಡೌನ್ ವಿಧಿಸಲಾಗಿದೆ.
ಇಂದು ಮಡಿಕೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ನಡೆಸಿದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸೋಮವಾರ ಮತ್ತು ಶುಕ್ರವಾರ ಮಾತ್ರ ಅಗತ್ಯ ವಸ್ತುಗಳ ಅಂಗಡಿ ಮಳಿಗೆಗಳು ಬೆಳಿಗ್ಗೆ 6 ರಿಂದ 12 ಗಂಟೆಯವರೆಗೆ ತೆರೆಯಬಹುದೆಂದು ಆದೇಶಿಸಲಾಗಿದೆ. ಈ ಹಿಂದೆ ಮಂಗಳವಾರ ಮತ್ತು ಶುಕ್ರವಾರ ಎಂದು ಜಿಲ್ಲಾಧಿಕಾರಿ ನಿಗದಿ ಮಾಡಿದ್ದರು ಎನ್ನಲಾಗಿದೆ.
ಆರೋಗ್ಯ ಇಲಾಖೆ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಕೊಡಗು ಜಿಲ್ಲೆಯಲ್ಲಿ 697 ಹೊಸ ಕರೊನಾ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣ ಸಂಖ್ಯೆ 5,618 ತಲುಪಿದೆ. ಇಂದು 245 ಜನರು ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಗೊಂಡಿದ್ದರೆ, 12 ಜನ ಕರೊನಾದಿಂದಾಗಿ ಸಾವಪ್ಪಿದ್ದಾರೆ.