

ಲಖನೌ: ಕಟ್ಟಡ ಒಂದರ ಗೋಡೆ ಕುಸಿದ ಪರಿಣಾಮ ಐವರು ಮೃತಪಟ್ಟು, 10ಕ್ಕೂ ಹೆಚ್ಚು ಜನ ಅವಶೇಷಗಳಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಮಥುರಾ ಜಿಲ್ಲೆಯ ವೃಂದಾವನದಲ್ಲಿ ನಡೆದಿದೆ.
ವೃಂದಾವನದ ಬಂಕೆ ಬಿಹಾರಿ ದೇವಸ್ಥಾನದ ರಸ್ತೆಯಲ್ಲಿ ದುರ್ಘಟನೆ ಸಂಭವಿಸಿದ್ದು, ಕಟ್ಟಡದ ಗೋಡೆಯೂ ಬೀಳುತ್ತಿರುವ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ರಕ್ಷಣಾ ಇಲಾಖೆಯ ಸಿಬ್ಬಂದಿ ಅವಶೇಷಗಳಡಿ ಸಿಲುಕಿರುವವರನ್ನು ಹೊರೆತೆಗೆದಿದ್ದಾರೆ.
ಘಟನೆಯಲ್ಲಿ ಐವರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಕಿತ್ಸೆಗೆಂದು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ತನಿಖೆಗೆ ಆದೇಶಿಸಲಾಗಿದೆ ಎಂದು ಹಿರಿಯ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.