Fire Accident| ಮನೆಗೆ ಬೆಂಕಿ ತಗುಲಿ ಒಂದೇ ಕುಟುಂಬದ ಐವರು ಸಜೀವ ದಹನ

Fire Accident
Published on

ಮುಂಬೈ: ಕಟ್ಟಡ ಒಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ (Fire Accident) ಒಂದೇ ಕುಟುಂಬದ ಐದು ಮಂದಿ ಸಜೀವ ದಹನವಾಗಿರುವ ಘಟನೆ ಮುಂಬೈನ (Mumbai) ಚೆಂಬೂರಿನ ಸಿದ್ಧಾರ್ಥ್ ಕಾಲೋನಿಯಲ್ಲಿ ನಡೆದಿದೆ.

ಮೃತರನ್ನು ಮಂಜು ಪ್ರೇಮ್ ಗುಪ್ತಾ (30), ಪ್ರೇಮ್ ಗುಪ್ತಾ (30), ಅನಿತಾ ಗುಪ್ತಾ (30), ನರೇಂದ್ರ ಗುಪ್ತಾ (10) ಮತ್ತು ಪ್ಯಾರಿಸ್​ ಗುಪ್ತಾ (07) ಎಂದು ಗುರುತಿಸಲಾಗಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಚೆಂಬೂರಿನ ಸಿದ್ಧಾರ್ಥ್ ಕಾಲೋನಿಯಲ್ಲಿರುವ ಅಂಗಡಿಯೊಂದರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಇಡೀ ಅಂಗಡಿಗೆ ಬೆಂಕಿ ಆವರಿಸಿದ್ದು, ಮೇಲಿನ ಮಹಡಿಯಲ್ಲಿ ವಾಸಿಸುತ್ತಿದ್ದ ಒಂದೇ ಕುಟುಂಬದ ಐವರು ಸುಟ್ಟು ಕರಕಲಾಗಿದ್ದಾರೆ.

ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಒಳಗೆ ಸಿಲುಕಿದ್ದವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net