ಭೀಕರ ರಸ್ತೆ ಅಪಘಾತಕ್ಕೆ ಐವರು ಬಲಿ, ನಾಲ್ವರಿಗೆ ಗಾಯ

gujarat-accident_17_August_20
Published on

ಅಹಮದಾಬಾದ್​: ಗುಜರಾತ್​ನ ಅಹಮದಾಬಾದ್​-ವಡೋದಾರ ರಾಷ್ಟ್ರೀಯ ಹೆದ್ದಾರಿ 8ರಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 8 ಹಾದು ಹೋಗುವ ಖೇಡಾ ಜಿಲ್ಲೆಯ ನಾಡಿಯಾದ್​ ಸಮೀಪ ಎರಡು ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಲ್ವರು ಗಂಭೀರ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರ ವಿವರಗಳು ಮತ್ತು ಗಾಯಗೊಂಡವರ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಾಗಿದ್ದು, ಶೀಘ್ರವೇ ಪತ್ತೆಹಚ್ಚಿ ಅವರ ಕುಟುಂಬದವರಿಗೆ ವಿವರ ತಿಳಿಸಲಾಗುವುದು ಎಂದು ಖೇಡಾ ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net