Tempo-PickupVan ನಡುವೆ ಭೀಕರ ಅಪಘಾತ; ಐದು ಮಂದಿ ಸಾವು, ಓರ್ವ ಗಂಭೀರ

Accident
Published on

ಲಖನೌ: ಟೆಂಪೋ ಮತ್ತು ಪಿಕ್​ಅಪ್​ ವ್ಯಾನ್​ (Tempo-PickupVan) ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಬದೌನ್​ನಲ್ಲಿ ನಡೆದಿದೆ. ದೆಹಲಿ-ಬದೌನ್​ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಅಪಘಾತದಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್​ ಅಧಿಕಾರಿ ಸಂಜೀವ್​ ಕುಮಾರ್, ಮುಜಾರಿಯಾ ಪ್ರದೇಶದಲ್ಲಿ ಟೆಂಪೋ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಐದು ಜನರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ. ಮೃತರ ಗುರುತು ಪತ್ತೆಯಾಗಬೇಕಿದ್ದು, ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನೆಯ ಕುರಿತು ಮತ್ತಷ್ಟು ಮಾಹಿತಿ ನೀಢಲಾಗುವುದು ಎಂದು ಪೊಲೀಸ್​ ಅಧಿಕಾರಿ ಸಂಜೀವ್​ ಕುಮಾರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net