ದುರ್ಗಾ ಪೂಜೆ ವೇಳೆ ಕಾಲ್ತುಳಿತ; ಬಾಲಕ ಸೇರಿದಂತೆ ಮೂವರು ಮೃತ್ಯು

Durga Pooja
Published on

ಪಟ್ನಾ: ನವರಾತ್ರಿ ವಿಶೇಷಾರ್ಥ ಆಯೋಜಿಸಲಾಗಿದ್ದ ದುರ್ಗಾ ಪೂಜೆಯಲ್ಲಿ ಸಂಭವಿಸಿದ ಕಾಲ್ತುಳಿತದಿಂದಾಗಿ ಐದು ವರ್ಷದ ಬಾಲಕ ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಬಿಹಾರದ ಗೋಪಾಲ್​ಗಂಜ್​ ಜಿಲ್ಲೆಯಲ್ಲಿ ನಡೆದಿದೆ.

ಗೋಪಾಲ್​ಗಂಜ್ ನಗರದ ರಾಜದಳ ಎಂಬ ಪ್ರದೇಶದಲ್ಲಿ ಘಟನೆ ನಡೆದಿದ್ದು, 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Stampade

ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸ್ವರ್ಣ ಪ್ರಭಾತ್, ಪ್ರಸಾದ ಸ್ವೀಕರಿಸುವ ವೇಳೆ ಬಾಲಕ ಕೆಳಗೆ ಬಿದ್ದ ಎಂಬ ಕಾರಣಕ್ಕೆ ಆತನನ್ನು ರಕ್ಷಿಸಲು ಇಬ್ಬರು ಮಹಿಳೆಯರು ಮುಂದಾಗಿದ್ದಾರೆ. ಈ ವೇಳೆ ಕಾಲ್ತುಳಿತ ಉಂಟಾಗಿದ್ದು, ಘಟನೆಯಲ್ಲಿ 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆ ನಡೆದ ಪ್ರದೇಶವನ್ನು ಸೀಲ್​ ಮಾಡಲಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲಾಗಿದೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದ್ದು, ಕಾನೂನು ಸುವ್ಯವಸ್ಥೆ ಹದಗೆಡದಂತೆ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸ್ವರ್ಣ ಪ್ರಭಾತ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net