ಆಟವಾಡುತ್ತ ಬೋರ್‌ವೆಲ್‌ಗೆ ಬಿದ್ದ 5 ವರ್ಷದ ಬಾಲಕ; ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ

Rescue Operation
Published on

ಜೈಪುರ: ಹೊಲದಲ್ಲಿ ಆಟವಾಡುತ್ತಿದ್ದಾಗ ಐದು ವರ್ಷದ ಬಾಲಕನೋರ್ವ 32 ಅಡಿ ಆಳದ ಬೋರ್​ವೆಲ್​ಗೆ (Borewell) ಬಿದ್ದಿರುವ ಘಟನೆ ರಾಜಸ್ಥಾನದ ಜಲಾವರ್ ಜಿಲ್ಲೆಯಲ್ಲಿ ನಡೆದಿದೆ. ಕೊಳವೆ ಬಾವಿಗೆ ಬಿದ್ದ ಮಗುವನ್ನು ಪ್ರಹ್ಲಾದ್ ಎಂದು ಗುರುತಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ಘಟನೆ ಕುರಿತು ಮಾತನಾಡಿರುವ ಡಿಎಸ್ಪಿ ಜೈಪ್ರಕಾಶ್ ಅಟಲ್ , ಬಾಲಕನ  ಪೋಷಕರು ಹೊಲದ ಇನ್ನೊಂದು ಬದಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ಸಮಯದಲ್ಲಿ ಆತ ಬೋರ್‌ವೆಲ್ (Borewell) ಬಳಿಯ ಕಲ್ಲಿನ ಚಪ್ಪಡಿಯ ಮೇಲೆ ಕುಳಿತುಕೊಂಡು ಅದರಿಂದ ಜಾರಿ ಬಿದ್ದಿದ್ದಾನೆ. ಪ್ರಹ್ಲಾದ್ ಪ್ರಸ್ತುತ 32 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾನೆ.

ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಕ್ಷಣಾ ಕಾರ್ಯದಲ್ಲಿ ತೊಡಗಿವೆ. ಸ್ಥಳೀಯ ಯಂತ್ರಗಳನ್ನು ಬಳಸಿಕೊಂಡು ಬಾಲಕನನ್ನು ಹೊರತೆಗೆಯಲು ಪ್ರಯತ್ನಿಸುತ್ತಿದ್ದೇವೆ. ಎರಡು ದಿನಗಳ ಹಿಂದೆ ಕೊಳವೆ ಬಾವಿಯನ್ನು ಅಗೆಯಲಾಗಿತ್ತು. ಅದರಿಂದ ನೀರು ಹೊರಹರಿವು ಇರಲಿಲ್ಲ ಮತ್ತು ಅದನ್ನು ಮುಚ್ಚಲು ನಿರ್ಧರಿಸಲಾಗಿತ್ತು. ಅಷ್ಟರಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಡಿಎಸ್ಪಿ ಜೈಪ್ರಕಾಶ್ ಅಟಲ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net