5 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ; ಆರೋಪಿ ಬಂಧಿಸಿದ ಪೊಲೀಸರು| Arrest

Arrest
Published on

Arrest: 5 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬಳಿಕ ಕತ್ತು ಹಿಸುಕಿ ಕೊಲೆ ಮಾಡಿದ ಆರೋಪದ ಮೇಲೆ ಓರ್ವನನ್ನು ಬಂಧಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ ಎಂದು ಭಾನುವಾರ (ಆಗಸ್ಟ್ 17) ವರದಿಯಾಗಿದೆ.

ಮನೆ ಬಳಿ ಆಟವಾಡಲು ಹೋದ ಬಳಿಕ ಕಾಣೆಯಾಗಿದ್ದಾನೆ ಎಂದು ಮೃತ ಬಾಲಕನ ತಂದೆ ತೆಲಂಗಾಣದ ಉಪ್ಪಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ಬಗ್ಗೆ ತನಿಖೆ ನಡೆಸಿ ಸುತ್ತಮುತ್ತಲಿನ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾ ಬಾಲಕ ಓರ್ವನ ಜೊತೆ ಹೋಗುವುದು ಪತ್ತೆಯಾಗಿತ್ತು. ಆಗಸ್ಟ್ 15ರಂದು ಆರೋಪಿಯನ್ನು ಬಂಧಿಸಿದ್ದು, ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ಟಿಂಬರ್ ಡಿಪೋದ ಕೆಲಸಗಾರನಾಗಿರುವ ಆರೋಪಿ ಆಗಸ್ಟ್ 12 ರಂದು ಬಿಸ್ಕತ್ತು ಕೊಡಿಸುವುದಾಗಿ ಆಮಿಷವೊಡ್ಡಿ,  ಮನೆಯ ಸಮೀಪವಿರುವ ನಿರ್ಜನ ಸ್ಥಳಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿ, ಬಳಿಕ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ವಿಚಾರಣೆ ಸಮಯದಲ್ಲಿ ಆರೋಪಿ ಬಾಲಕನನ್ನು ಕೊಲೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದು, ಬಾಲಕನ ಶವ ಅವರ ಮನೆಯ ಪಕ್ಕದ ಪೊದೆಯಲ್ಲಿ ಪತ್ತೆಯಾಗಿದೆ. ಪೋಕ್ಸೋ ಕಾಯ್ದೆಯಡಿ ಮತ್ತು ಬಿಎನ್​ಎಸ್ ಇತರೆ ಸೆಕ್ಷನ್​ಗಳ ಅಡಿ ಕೇಸ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net