ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 5 ವರ್ಷ ಜೈಲು

Delhi Higcourt
Published on

ಬೆಂಗಳೂರು: ಬುದ್ಧಿಮಾಂದ್ಯ ಅಪ್ರಾಪ್ತೆಯ ಪ್ರೀತಿಸುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದವಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿ ಎ್ಟಿಎಸ್‌ಸಿ 1ನೇ ನ್ಯಾಯಾಲಯ ತೀರ್ಪು ನೀಡಿದೆ.

ನಾಯಂಡಹಳ್ಳಿ ನಿವಾಸಿ ಚಂದ್ರಶೇಖರ್ (25) ಅಪರಾಧಿ. 5 ವರ್ಷ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ ವಿಧಿಸಿ ನ್ಯಾಯಾಧೀಶೆ ಕೆ.ಎನ್. ರೂಪಾ ತೀರ್ಪು ಪ್ರಕಟಿಸಿದ್ದಾರೆ. ಸಂತ್ರಸ್ತೆಗೆ 1 ಲಕ್ಷ ರೂ. ಪರಿಹಾರ ನೀಡುವಂತೆ ಸರ್ಕಾರಕ್ಕೆ ಸೂಚಿಸಿದ್ದಾರೆ. ಪಬ್ಲಿಕ್ ಪ್ರಾಸಿಕ್ಯೂಟರ್ ಪಿ. ಕೃಷ್ಣವೇಣಿ, ಸಂತ್ರಸ್ತೆ ಪರ ವಾದ ಮಂಡಿಸಿದ್ದರು.

17 ವರ್ಷದ ಬುದ್ಧಿಮಾಂದ್ಯ ಸಂತ್ರಸ್ತೆಯನ್ನು ಪ್ರೀತಿಸುವ ನಾಟಕ ಮಾಡಿದ ಅಪರಾಧಿ, 2022ರ ಏಪ್ರಿಲ್ 14ರ ಸಂಜೆ 6 ಗಂಟೆಯಲ್ಲಿ ಆಕೆಯ ಮನೆಗೆ ಹೋಗಿದ್ದ. ಯಾರೂ ಇಲ್ಲದಿರುದನ್ನು ಗಮನಿಸಿ ಅಸಭ್ಯವಾಗಿ ವರ್ತಿಸಿದ್ದ.

ಇದನ್ನು ತಿಳಿದ ಸಂತ್ರಸ್ತೆಯ ತಾಯಿ, ಹುಳಿಮಾವು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಪ್ರಕರಣ ದಾಖಲು ಮಾಡಿಕೊಂಡ ಅಂದಿನ ಇನ್‌ಸ್ಪೆಕ್ಟರ್ ಎಸ್. ಮಹೇಶ್, ತನಿಖೆ ಕೈಗೊಂಡ ಚಂದ್ರಶೇಖರ್‌ನ್ನು ಬಂಧಿಸಿ ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ತೀರ್ಪು ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net