ಸರ್ಕಾರಿ ಶಾಲಾ ಮಕ್ಕಳಿಗೆ ಡೆಸ್ಕ್ ಖರೀದಿಗೆ 50 ಕೋಟಿ ರೂ. ಬಿಡುಗಡೆ

Govt School
Published on

ಬೆಂಗಳೂರು ಶಾಲಾ ಶಿಕ್ಷಣ ಇಲಾಖೆಯು 2022-23ನೇ ಸಾಲಿಗೆ ರಾಜ್ಯದ 32 ಶೈಕ್ಷಣಿಕ ಜಿಲ್ಲೆಗಳ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 5 ಸೀಟರ್ ರಿವರ್ಸಿಬಲ್ ಡೆಸ್ಕ್ ಸರಬರಾಜು ಮಾಡಲು 49.89 ಕೋಟಿ ರೂ.ಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತದಿಂದ ಸರ್ಕಾರಿ ಶಾಲೆ ಮತ್ತು ಪಿಯು ಕಾಲೇಜು ಸೇರಿದಂತೆ 67,742 ಡೆಸ್ಕ್‌ಗಳನ್ನು ಖರೀದಿಸುತ್ತಿದೆ. ಖರೀದಿಗೆ ಶೇ.10 ಪಾವತಿ ಮಾಡಿದ್ದು, ಉಳಿದ ಶೇ.90 ಹಣವನ್ನು ಜಿಲ್ಲಾ ಹಂತದಲ್ಲಿ ಜಿಲ್ಲಾ ಉಪನಿರ್ದೇಶಕರಿಂದ ಬಿಡುಗಡೆ ಮಾಡುವುದಾಗಿ ಶಿಕ್ಷಣ ಇಲಾಖೆ ತಿಳಿಸಿದೆ. ಈ ಹಿಂದೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶಾಲಾ-ಕಾಲೇಜು ಮಕ್ಕಳಿಗೆ ಉತ್ತಮ ಡೆಸ್ಕ್‌ಗಳನ್ನು ನೀಡುವುದಾಗಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಖರೀದಿಗೆ ಶಿಕ್ಷಣ ಇಲಾಖೆ ಮುಂದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net