ರಾಜಹಂಸಗಡ ಕೋಟೆ ಅಭಿವೃದ್ಧಿಗೆ 50 ಲಕ್ಷ ಅನುದಾನ

LAKSHMI
Published on

ಬೆಂಗಳೂರು: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಛತ್ರಪತಿ ಶಿವಾಜಿ ಮಹಾರಾಜರ ರಾಜಹಂಸಗಡ ಕೋಟೆಯ ಅಭಿವೃದ್ಧಿಗೆ 50 ಲಕ್ಷ ರೂ. ಅನುದಾನ ನೀಡಲು ಪ್ರವಾಸೋದ್ಯಮ ಸಚಿವರಾದ ಎಚ್ ಕೆ ಪಾಟೀಲ್ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಅವರನ್ನು ಭೇಟಿ ಮಾಡಿ, ರಾಜಹಂಸಗಡ ಕೋಟೆಯ ಅಭಿವೃದ್ಧಿಗೆ ಪ್ರತಿ ವರ್ಷ ಒಂದು ಕೋಟಿ ರೂಪಾಯಿ ಅನುದಾನ ನೀಡುವಂತೆ ಸಚಿವರು ಮನವಿ ಸಲ್ಲಿಸಿದರು.

ಮನವಿಗೆ ಸ್ಪಂದಿಸಿದ ಸಚಿವರು, ರಾಜಹಂಸಗಡ ಕೋಟೆಯ ಅಭಿವೃದ್ಧಿಗೆ 50 ಲಕ್ಷ ರೂ. ಅನುದಾನ ಬಿಡುಗಡೆಗೊಳಿಸಲು ಒಪ್ಪಿಗೆ ನೀಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net