ಮತ್ತೊಮ್ಮೆ ಕಂಪ್ಲೀಟ್ ಲಾಕ್​ಡೌನ್​ನತ್ತ ಹೊರಳುತ್ತಿದೆ ಈ ರಾಜ್ಯ

lockdown
Published on

ಮುಂಬೈ: ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಮಹಾರಾಷ್ಟ್ರ ಸರ್ಕಾರ ಇಂದು ಮಹತ್ವದ ತೀರ್ಮಾನ ತೆಗೆದುಕೊಂಡಿದೆ.

ಶಾಲಾ ಕಾಲೇಜುಗಳನ್ನು ಈಗಾಗಲೇ ಬಂದ್ ಮಾಡಿರುವ ಅಲ್ಲಿನ ಸರ್ಕಾರ, ಚಿತ್ರಮಂದಿರ, ಆಡಿಟೋರಿಯಮ್​ಗಳು, ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಶೇ 50 ರಷ್ಟು ಜನಕ್ಕೆ ಮಾತ್ರ ಪ್ರವೇಶ ಕಲ್ಪಿಸುವ ಆದೇಶ ನೀಡಿದೆ. ಮಾರ್ಚ್ 31 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ಆರೋಗ್ಯ ಹಾಗೂ ತುರ್ತು ಸೇವೆಗೆ ಇದರಲ್ಲಿ ವಿನಾಯಿತಿ ಇದೆ.

ಗುರುವಾರದ ಒಂದೇ ದಿನ ಮಹಾರಾಷ್ಟ್ರದಲ್ಲಿ 25,833 ಹೊಸ ಸೋಂಕಿತ ಪ್ರಕರಣಗಳು ಕಂಡು ಬಂದಿದ್ದು, ರಾಜ್ಯ ಸಂಪೂರ್ಣ ಲಾಕ್​ಡೌನ್​​ನತ್ತ ಹೊರಳಲಿದೆಯೇ ಎಂಬುದನ್ನು ಇದು ಬಲವಾಗಿ ಸೂಚಿಸುತ್ತದೆ.

ಈಗಾಗಲೇ ಕೇಂದ್ರ ಸರ್ಕಾರ ಕರೊನಾವೈರಸ್​ನ ಎರಡನೇ ಅಲೆ ಮಹಾರಾಷ್ಟ್ರದಲ್ಲಿ ಕಂಡು ಬಂದಿದೆ ಎಂದು ಹೇಳಿರುವುದರಿಂದ ಜನರು ಸುರಕ್ಷತಾ ಕ್ರಮಗಳನ್ನು ಪಾಲಿಸದಿದ್ದರೇ ಲಾಕ್​ಡೌನ್ ಜಾರಿಗೊಳಿಸಲಾಗುವುದು ಎಂಬ ಎಚ್ಚರಿಕೆಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net