

ನವದೆಹಲಿ: ದೇಶದಲ್ಲಿ ಕರೊನಾ ನಾಲ್ಕನೆಯ ಅಲೆಯ ಭೀತಿಯ ನಡುವೆಯೇ ಕೋವಿಡ್-19 ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗಿದ್ದು, ನಿಧಾನಗತಿಯಲ್ಲಿ ಮತ್ತೆ ಕರೊನಾ ಹೆಚ್ಚಾಗಬಹುದೇ ಎಂಬ ಆತಂಕವೂ ಕಾಡಲಾರಂಭಿಸಿದೆ.
ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಎಲ್ಲರೂ ಮಾಸ್ಕ್ ಧರಿಸಬೇಕು, ಕೋವಿಡ್ ಮುನ್ಸೂಚನೆಗಳನ್ನು ತಪ್ಪದೇ ಪಾಲಿಸಬೇಕು ಎಂಬುದಾಗಿ ರಾಜ್ಯದಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಜನರನ್ನು ಎಚ್ಚರಿಸಿದ್ದಾರೆ.
ಇನ್ನೊಂದೆಡೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಾಜ್ಯಾಡಳಿತ ಇನ್ನೊಂದು ಹೆಜ್ಜೆ ಮುಂದೆ ಹೋಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವುದಾಗಿ ಹೇಳಿದೆ. ದೆಹಲಿಯಲ್ಲಿ ಮಾಸ್ಕ್ ಧರಿಸದಿದ್ದರೆ 500 ರೂ. ದಂಡ ಬೀಳಲಿದೆ. ಆದರೆ ಖಾಸಗಿ ನಾಲ್ಕು ಚಕ್ರದ ವಾಹನಗಳಲ್ಲಿ ಸಂಚರಿಸುವವರಿಗೆ ಇದು ಅನ್ವಯಿಸುವುದಿಲ್ಲ ಎಂದು ಇಂದು ಆದೇಶ ಹೊರಡಿಸಿದೆ.