500 ರೂ. ಲಂಚ ಪಡೆದ ಅಪರಾಧಿಗೆ 7ವರ್ಷ ಶಿಕ್ಷೆ

Gavel on desk. Isolated with good copy space. Dramatic lighting.
Gavel on desk. Isolated with good copy space. Dramatic lighting.
Published on

ಚಿತ್ರದುರ್ಗ: ಸಿಂಧುತ್ವ ಪ್ರಮಾಣಪತ್ರಕ್ಕೆ ಶಿಫಾರಸು ಮಾಡಲು 500 ರೂ. ಲಂಚ ಪಡೆದ ಅಪರಾಧಿಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 7 ವರ್ಷ ಶಿಕ್ಷೆ, 3 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಹೊಳಲ್ಕೆರೆ ತಾಲೂಕಿನ ರಾಮಗಿರಿ ಕಂದಾಯ ನಿರೀಕ್ಷಕ ಮಂಜಣ್ಣ ಶಿಕ್ಷೆಗೆ ಗುರಿಯಾದವರು.

ರಘು ಎಂಬುವವರಿಗೆ ವೈರ್‌ಲೆಸ್ ಇಲಾಖೆಯಲ್ಲಿ ಪೊಲೀಸ್ ಕೆಲಸ ಸಿಕ್ಕಿದ್ದು, ಸಿಂಧುತ್ವ ಪ್ರಮಾಣಪತ್ರ ಶಿಫಾರಸು ಮಾಡಲು ಮಂಜಣ್ಣ 1 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದರು. ಈ ಕುರಿತು 2018ರ ಜ. 24ರಂದು ರಘು ಚಿತ್ರದುರ್ಗದ ಎಸಿಬಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ತನಿಖೆ ನಡೆಸಿದ ಪೊಲೀಸರು 500 ರೂ. ಲಂಚ ಪಡೆದಿರುವ ಕುರಿತು ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು. ವಿಚಾರಣೆಯಲ್ಲಿ ಮಂಜಣ್ಣನ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಧೀಶ ರೋಣ ವಾಸುದೇವ್ ಭ್ರಷ್ಟಾಚಾರ ನಿರ್ಬಂಧ ಕಾಯ್ದೆಯಡಿ ಶಿಕ್ಷೆ, ದಂಡ ವಿಧಿಸಿ ಮಂಗಳವಾರ ತೀರ್ಪು ನೀಡಿದ್ದಾರೆ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿ 15 ದಿನ ಶಿಕ್ಷೆ ಅನುಭವಿಸುವಂತೆ ಆದೇಶಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net