24 ಗಂಟೆಯಲ್ಲಿ ರಾಜ್ಯದಲ್ಲಿ ಬರೋಬ್ಬರಿ 515 ಕರೊನಾ ಪ್ರಕರಣಗಳು; ಉಡುಪಿಯಲ್ಲಿ ದ್ವಿಶತಕ

Corona Virus 26 May 20
Published on

ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ ದಿನೇದಿನೆ ಹೆಚ್ಚುತ್ತಲೇ ಇದೆ. ಕಳೆದ 24ಗಂಟೆಯಲ್ಲಿ ಬರೋಬ್ಬರಿ 515 ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3088ಕ್ಕೆ ಏರಿದೆ. ಇಂದು ಕಂಡುಬಂದ ಪ್ರಕರಣಗಳಲ್ಲಿ 482 ಮಂದಿ ಅಂತಾರಾಜ್ಯ ಪ್ರಯಾಣಿಕರೇ ಆಗಿದ್ದಾರೆ.

ರಾಜ್ಯದಲ್ಲಿ ಇದುವರೆಗೆ ಕೊವಿಡ್​-19ನಿಂದ 57 ಮಂದಿ ಮೃತಪಟ್ಟಿದ್ದು, 1688 ಮಂದಿ ಚೇತರಿಸಿಕೊಂಡು ಡಿಸ್​ಚಾರ್ಜ್​ ಆಗಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳು 4835 ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಕಳೆದ 24 ಗಂಟೆಯಲ್ಲಿ ಅತಿ ಹೆಚ್ಚು ಸೋಂಕಿತರು ದಾಖಲಾಗಿದ್ದು ಉಡುಪಿಯಲ್ಲಿ . ಭರ್ಜರಿ 204 ಮಂದಿಯಲ್ಲಿ ಕರೊನಾ ದೃಢಪಟ್ಟಿದ್ದು, ಆತಂಕ ಮೂಡಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಕೇಸ್​ಗಳು ದಾಖಲಾಗಿವೆ? ಇಲ್ಲಿದೆ ನೋಡಿ ಪಟ್ಟಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net