

ಬೆಂಗಳೂರು: ಪಿಎಸ್‌ಐ 545 ಹುದ್ದೆಗಳ ನೇಮಕಾತಿ ಹಗರಣ ಸಂಬಂಧ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ್, ಡಾ.ಸಿ.ಎನ್.ಅಶ್ವತ್ಥನಾರಾಯಣ, ಮಾಜಿ ಶಾಸಕ ಬಸವರಾಜ್ ದಢೇಸುಗೂರು ಅವರಿಗೆೆ ನ್ಯಾಯಮೂರ್ತಿ ಬಿ. ವೀರಪ್ಪ ಏಕಸದಸ್ಯ ವಿಚಾರಣಾ ಆಯೋಗ ನೋಟಿಸ್ ಕೊಟ್ಟಿದ್ದು, ಸಾಕ್ಷಿ ಹೇಳಿಕೆ ನೀಡುವಂತೆ ಸೂಚಿಸಿದೆ.
ಬುಧವಾರ ಬೆಳಗ್ಗೆ 11 ಗಂಟೆಗೆ ಖುದ್ದು ಆಯೋಗದ ಮುಂದೆ ಹಾಜರಾಗಿ ಸಾಕ್ಷಿ ಹೇಳಿಕೆ ನೀಡುವಂತೆ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ಹಗರಣ ಸಂಬಂಧ ಇವರು ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದರು. ಈ ಸಂಬಂಧ ಕೆಲ ದಿನಗಳ ಹಿಂದೆ ವಕೀಲರೊಬ್ಬರು ಆಯೋಗಕ್ಕೆ ಅರ್ಜಿ ಸಲ್ಲಿಸಿ ಇವರನ್ನು ಸಾಕ್ಷಿಯಾಗಿ ಪರಿಗಣಿಸುವಂತೆ ಮನವಿ ಮಾಡಿದ್ದಾರೆ.