

ಶಿಮ್ಲಾ: ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಬೆಟ್ಟಕ್ಕೆ ಡಿಕ್ಕಿ ಹೊಡೆದ ಪರಿಣಾಮ 56 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹಿಮಾಚಲಪ್ರದೇಶದ ಶಿಮ್ಲಾ ಜಿಲ್ಲೆಯ ರೋಹ್ರು ಪ್ರದೇಶದಲ್ಲಿ ನಡೆದಿದೆ.
ಬಸ್ ತಿಂಜನುವಿನಿಂದ ಚಿದ್ಗಾಂವ್ಗೆ ತೆರಳುತ್ತಿದ್ದ ವೇಳೆ ಬರ್ಶೀಲ್ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್ ಅಧಿಕಾರಿ ಬ್ರೇಕ್ ವೈಫಲ್ಯವೇ ಅಪಘಾತಕ್ಕೆ ಕಾರಣವಾಗಿರಬಹುದು. ಮೊದಲಿಗೆ ಚಾಲಕ ಪ್ರಯಾಣಿಕರ ಬಳಿ ಈ ಬಗ್ಗೆ ಹೇಳಿದ್ದಾನೆ. ಆ ನಂತರ ಬಸ್ಅನ್ನು ಬೆಟ್ಟಕ್ಕೆ ಡಿಕ್ಕಿ ಹೊಡೆಸುವ ಮೂಲಕ ಕಂದಕಕ್ಕೆ ಉರುಳುವುದನ್ನು ತಪ್ಪಿಸಿದ್ಧಾನೆ.
ಅಪಘಾತದಲ್ಲಿ ಸುಮಾರು56ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗೊಂಡಿದ್ದು ಗಾಯಾಳುಗಳಿಗೆ ಚಿದ್ಗಾಂವ್ ಸಮುದಾಯ ಕೇಂದ್ರ, ಸವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ಘಟನೆಯ ಕುರಿತು ಪೊಲೀಸ್ ಅಧಿಕಾರಿ ಪ್ರತಿಕ್ರಿಯಿಸಿದ್ದಾರೆ.
ಕಳೆದ ಎರಡು ದಿನಗಳಲ್ಲಿ ಇದು ಎರಡನೇ ಪ್ರಕರಣವಾಗಿದ್ದು ಗುರುವಾರ ಮಂಡಿ ಜಿಲ್ಲೆಯಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿತ್ತು.