ಕಾಂಗ್ರೆಸ್ ಬೆಂಬಲಿತ 6 ಮಂದಿ ಆಯ್ಕೆ

pldb
ಶಿಕಾರಿಪುರ ಪಿಎಲ್‌ಡಿ ಬ್ಯಾಂಕ್ ಆಯ್ಕೆಯಾದ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರನ್ನು ಸನ್ಮಾನಿಸಲಾಯಿತು. ನಾಗರಾಜ್ ಗೌಡ, ಶಿವರಾಂ, ಉಮೇಶ್, ಉಮೇಶ್ ಇತರರಿದ್ದರು.
Published on

ಶಿಕಾರಿಪುರ: ತಾಲೂಕು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್‌ಡಿ) ಬ್ಯಾಂಕ್ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಸ್ಪರ್ಧಿಸಿದ 10 ಜನರಲ್ಲಿ ಕಾಂಗ್ರೆಸ್ ಬೆಂಬಲಿತ 6 ಅಭ್ಯರ್ಥಿಗಳು ಜಯಗಳಿಸಿದ್ದಾರೆ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಪಿ.ನಾಗರಾಜ್ ಗೌಡ ಹೇಳಿದರು

ಗೃಹ ಕಚೇರಿಯಲ್ಲಿ ಗೆದ್ದವರನ್ನು ಸನ್ಮಾನಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಿದೆ. ಎಲ್ಲರ ಪರಿಶ್ರಮದಿಂದ ಗೆಲುವು ಸಾಧ್ಯವಾಗಿದೆ. ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ಜನಪರವಾಗಿ ಕೆಲಸ ಮಾಡುತ್ತಿದೆ ಎಂದರು.

ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ಬೆಂಬಲಿತ ಕಾಂತರಾಜ್, ಉಮೇಶ್, ಶಾಂತಮ್ಮ ಈಶ್ವರಪ್ಪ, ರೋಹಿತ್, ಸುವರ್ಣಾ, ದಿನೇಶ್ ಜಯಗಳಿಸಿದ್ದಾರೆ. ಕೃಷಿಕರು ಪಕ್ಷವನ್ನು ಬೆಂಬಲಿಸಿದ್ದಾರೆ. ಮುಂಬರುವ ಯಾವುದೇ ಚುನಾವಣೆಗಳಿರಲಿ ಅವುಗಳಿಗೆ ಪೂರಕವಾಗಿ ಪಕ್ಷವನ್ನು ಇನ್ನಷ್ಟು ಬಲಗೊಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಾರಿವಾಳದ ಶಿವರಾಂ, ಮಾರವಳ್ಳಿ ಉಮೇಶ್, ಕೋಡಿಹಳ್ಳಿ ಉಮೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net