

Bridge Collapse: ಇಂದ್ರಯಾಣಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಕುಸಿದಿದ್ದು, ಹಲವಾರು ಪ್ರವಾಸಿಗರು ನೀರಿನಲ್ಲಿ ಕೊಚ್ಚಿಹೋದ ಘಟನೆ ಮಹಾರಾಷ್ಟ್ರ ಜಿಲ್ಲೆಯ ಪುಣೆಯಲ್ಲಿ ವರದಿಯಾಗಿದೆ.
ಇತ್ತೀಚಿನ ವರದಿ ಪ್ರಕಾರ, ದುರ್ಘಟನೆಯಲ್ಲಿ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. 20ಕ್ಕೂ ಅಧಿಕ ಮಂದಿ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ. ಸ್ಥಳಕ್ಕೆ ರಕ್ಷಣಾ ಪಡೆಗಳು ಧಾವಿಸಿದ್ದು, ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಡುತ್ತಿದೆ.
ಭಾನುವಾರ ಆದ ಹಿನ್ನೆಲೆ ಇಂದ್ರಯಾಣಿ ನದಿ ಕಣ್ತುಂಬಿಕೊಳ್ಳಲು ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು. ಇದೇ ವೇಳೆ ಹಳೆಯದ್ದಾಗಿದ್ದ ಸೇತುವೆ ಕುಸಿದು ಹಲವರ ಸಾವು-ನೋವಿಗೆ ಕಾರಣವಾಗಿದೆ. ಘಟನೆ ಕುರಿತು ಪೊಲೀಸರು ಮತ್ತು ಸಚಿವರು ಪ್ರತಿಕ್ರಿಯಿಸಿದ್ದಾರೆ.