ಆಸ್ತಿ ಘೋಷಣೆ ಮಾಡದ 6 ಗ್ರಾಪಂ ಸದಸ್ಯರು ಅನರ್ಹ|not declare assets

Vidhanasoudha
Published on

ಬೆಂಗಳೂರು: ಆಸ್ತಿ ಘೋಷಣೆ ಮಾಡದ 6 ಗ್ರಾಪಂ ಸದಸ್ಯರ ಸದಸ್ಯತ್ವವನ್ನು ರಾಜ್ಯ ಚುನಾವಣಾ ಆಯೋಗ ರದ್ದುಗೊಳಿಸಿದೆ(6 Gram members who do not declare assets are ineligible) . ಸದಸ್ಯತ್ವ ರದ್ದುಗೊಂಡ ಸದಸ್ಯ ಸ್ಥಾನಗಳನ್ನು ಖಾಲಿ ಎಂದೂ ಘೋಷಿಸಿದೆ.

ಚಿಕ್ಕಮಗಳೂರು ಜಿಲ್ಲೆ ಅತ್ತಿಕೊಡಿಗೆ ಗ್ರಾಮ ಪಂಚಾಯಿತಿಯ ಚೈತ್ರಾ ರಘು, ಅಜ್ಜಂಪುರ ತಾಲೂಕು ಸೊಕ್ಕೆ ಗ್ರಾಮ ಪಂಚಾಯಿತಿಯ ಎಸ್.ಎಚ್.ಚಂದ್ರಶೇಖರ್, ಕಲಬುರಗಿ ಜಿಲ್ಲೆ ಅಳಂದ ಆಲೂಕು ಅಳಂಗಾ ಗ್ರಾಮ ಪಂಚಾಯಿತಿಯ ಗಣಪತಿ, ಕಮಲಾಪೂರ ತಾಲೂಕು ವ್ಹಿ.ಕೆ.ಸಲಗರ ಗ್ರಾಮ ಪಂಚಾಯಿತಿಯ ಇಸ್ಮಾಯಿಲ್ ಸಾಬ್, ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಚಿಕ್ಕಾಂಶಿ ಹೊಸೂರು ಗ್ರಾಮ ಪಂಚಾಯಿತಿಯ ಮಂಜುಳಾ ರಾಜಪ್ಪ ಹುಳ್ಳಿ ಹಾಗೂ ಕೊಡಗು ಜಿಲ್ಲೆ ಮಡಿಕೇರಿ ತಾಲೂಕು ಕಳಕೇರಿ ಗ್ರಾಮ ಪಂಚಾಯಿತಿಯ ಬಿ.ವಿ. ಪ್ರಮೀಳಾ ಅವರನ್ನು ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.

ಈ ಸದಸ್ಯರಿಗೆ ನೋಟಿಸ್ ನೀಡಿದಾಗಲೂ ಯಾವುದೇ ಉತ್ತರ ನೀಡದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ನಿಯಮಗಳಡಿ ಆಸ್ತಿ ಘೋಷಣೆ ಮಾಡಿಕೊಳ್ಳದ ಸದಸ್ಯರ ಸದಸ್ಯತ್ವ ರದ್ದತಿಗೆ ಅವಕಾಶವಿದ್ದು, ಈ ಕಾಯ್ದೆ ಬಳಸಿ ಆರು ಮಂದಿ ಸದಸ್ಯರನ್ನು ರಾಜ್ಯ ಚುನಾವಣಾ ಆಯೋಗ ಅನರ್ಹಗೊಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net