ಸಿಸಿಬಿಯಿಂದ 6 ಪೆಡ್ಲರ್‌ಗಳ ಸೆರೆ

drugs
Published on

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಾದಕ ದ್ರವ್ಯ ಸಾಗಾಟ, ಮಾರಾಟ, ಸೇವನೆ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಸಿಸಿಬಿ ಪೊಲೀಸರು, ಮೂವರು ವಿದೇಶಿ ಪೆಡ್ಲರ್‌ಗಳು ಸೇರಿ 6 ಮಂದಿಯನ್ನು ಬಂಧಿಸಿದ್ದಾರೆ.

ವಾರದಲ್ಲಿ ಸಿಸಿಬಿ ಪೊಲೀಸರು ಯಲಹಂಕ, ಕೆ.ಜಿ. ನಗರ, ಹೆಣ್ಣೂರು, ರಾಜಗೋಪಾಲನಗರ ಮತ್ತು ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ ಮೂವರು ವಿದೇಶಿಯರು ಮತ್ತು ಹೊರರಾಜ್ಯದ ಮೂವರು ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ.

ಇವರಿಂದ 44 ಲಕ್ಷ ರೂ. ಮೌಲ್ಯದ 54 ಗ್ರಾಂ ಎಂಡಿಎಂಎ ಹರಳು, 410 ಗ್ರಾಂ ಹೈಡ್ರೋ ಗಾಂಜಾ, 18 ಕೆ.ಜಿ. ಗಾಂಜಾ ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಲಹಂಕದ ಖಾಸಗಿ ಕಂಪನಿಯ ಮಾರ್ಕೆಟಿಂಗ್ ಮ್ಯಾನೇಜರ್ ಆಗಿದ್ದ ಪೆಡ್ಲರ್, ಹೊರರಾಜ್ಯದಿಂದ ಗಾಂಜಾ ತರಿಸಿಕೊಂಡು ನಗರದ ವ್ಯಸನಿಗಳಿಗೆ ಮಾರಾಟ ಮಾಡುತ್ತಿದ್ದರು.

ಕೆ.ಜಿ. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೊಬ್ಬ ಪೆಡ್ಲರ್, ಗಿಟಾರ್ ಕಲಿಯಲು ಬೆಂಗಳೂರಿಗೆ ಬಂದು ವಿದೇಶದಿಂದ ಡ್ರಗ್ಸ್ ಖರೀದಿಸಿ ಮಾರಾಟ ಮಾಡುತ್ತಿದ್ದ. ವಿದೇಶಿ ಪೆಡ್ಲರ್‌ಗಳು, ವ್ಯಾಪಾರ ವೀಸಾ ಪಡೆದು ನಗರಕ್ಕೆ ಬಂದು ವೀಸಾ ಅವಧಿ ಮುಗಿದ ಮೇಲೂ ಇಲ್ಲಿಯೇ ಉಳಿದುಕೊಂಡು ಡ್ರಗ್ಸ್ ದಂಧೆ ನಡೆಸುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net