ವ್ಯಾನ್‌ಗೆ ಟ್ರಕ್ ಡಿಕ್ಕಿ: 6 ಮಂದಿ ಮೃತ್ಯು, 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ

Crime
Published on

ಛತ್ತೀಸ್‌ಗಢ: ವ್ಯಾನ್‌ಗೆ ಟ್ರಕ್ ಡಿಕ್ಕಿ ಹೊಡೆದು 6 ಮಂದಿ ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಬಲೋದಬಜಾರ್‌ನಲ್ಲಿ ನಡೆದಿದೆ.

ಛತ್ತೀಸ್‌ಗಢದ ಬಲೋದಬಜಾರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು 30 ಜನರನ್ನು ಹೊತ್ತೊಯ್ಯುತ್ತಿದ್ದ ಪಿಕ್ ಅಪ್ ವ್ಯಾನ್‌ಗೆ ಟ್ರಕ್ ಡಿಕ್ಕಿ ಹೊಡೆದು ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಅಪಘಾತದಲ್ಲಿ ಸುಮಾರು 25 ಮಂದಿ ಗಾಯಗೊಂಡಿದ್ದಾರೆ.

ಮೃತರಲ್ಲಿ ಐವರು ಮಹಿಳೆಯರು ಮತ್ತು ಒಂದು ಮಗು ಸೇರಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net