ಕಾರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಆರು ಮಂದಿ ಸಾವು; ದೇವಸ್ಥಾನಕ್ಕೆ ಹೊರಟವರು ನೇರ ಸೇರಿದ್ದು ಮಸಣಕ್ಕೆ

Accident
Published on

ಜೈಪುರ: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಆರು ಜನ ಯಾತ್ರಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಜಸ್ಥಾನದ ಬುಂದಿ ಜಿಲ್ಲೆಯಲ್ಲಿ ನಡೆದಿದೆ.

ಬೆಳಗಿನ ಜಾವ 4:30ರ ಸುಮಾರಿಗೆ ಜೈಪುರ ರಾಷ್ಟ್ರೀಯ ಹೆದ್ದಾರಿಯ ಹಿಂದೋಲಿ ಬಳಿ ಅಪಘಾತ ಸಂಭವಿಸಿದ್ದು, ಮೃತ ಯಾತ್ರಾರ್ಥಿಗಳು ಉತ್ತರ ಪ್ರದೇಶದ ದೇವಾಸ್ ನಿವಾಸಿಗಳೆಂದು ತಿಳಿದು ಬಂದಿದೆ. ಸಿಕಾರ್ ಜಿಲ್ಲೆಯ ಖತು ಶ್ಯಾಮ್ ದೇವಸ್ಥಾನಕ್ಕೆ ತೆರಳುವಾಗ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉಮಾ ಶರ್ಮಾ, ಮಾರುತಿ ಸುಜುಕಿ ಇಕೋ ಕಾರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಆರು ಜನರು ಮೃತಪಟ್ಟಿದ್ಧಾರೆ. ಮೃತರೆಲ್ಲರೂ ಉತ್ತರಪ್ರದೇಶದ ನಿವಾಸಿಗಳೆಂದು ತಿಳಿದು ಬಂದಿದ್ದು, ಅಪರಿಚಿತ ವಾಹನವನ್ನು ಪತ್ತೆಹಚ್ಚಲು ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಘಟನೆಯ ಕುರಿತು ವಿವರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net