

ಬೆಂಗಳೂರು: ನಕಲಿ ನೋಟು ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ವನಿತಾ ಅಲಿಯಾಸ್ ತಂಗಂಗೆ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯ 6 ವರ್ಷ ಜೈಲುಶಿಕ್ಷೆ ಜತೆಗೆ 20 ಸಾವಿರ ದಂಡ ವಿಧಿಸಿದೆ. ೨೦೧೮ರಲ್ಲಿ ಬಾಂಗ್ಲಾದೇಶದಿಂದ ಅಕ್ರಮವಾಗಿ ರಾಜ್ಯಕ್ಕೆ ಖೋಟಾ ನೋಟು ಸಾಗಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ಎನ್‌ಐಎ ಮತ್ತು ಪೊಲೀಸರು ಕಾರ್ಯಾಚರಣೆ ನಡೆಸಿ, 8 ಜನರನ್ನು ಬಂಧಿಸಿ ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಈ ವೇಳೆ ಅಪರಾಧಿ ವನಿತಾ ಬಳಿ 2.5 ಲಕ್ಷ ನಕಲಿ ನೋಟು ಪತ್ತೆಯಾಗಿತ್ತು. ಈ ಕುರಿತು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು. ಇದೀಗ ಪ್ರಕರಣದ ೬ನೇ ಆರೋಪಿ ವನಿತಾ ಆರೋಪ ಸಾಬೀತಾದ ಹಿನ್ನೆಲೆ ಶಿಕ್ಷೆ ವಿಧಿಸಲಾಗಿದೆ.