ಶಿವಮೊಗ್ಗದಲ್ಲಿ 60 ಕಿ.ಮೀ. ಮಾನವ ಸರಪಳಿ

Democracy Day
ಶಿವಮೊಗ್ಗ ಡಿಸಿ ಕಚೇರಿ ಎದುರು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಗಾಂಧೀಜಿ, ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಎಸ್.ಎನ್.ಚನ್ನಬಸಪ್ಪ, ಬಲ್ಕಿಷ್ ಬಾನು, ಎಚ್.ಎಸ್.ಸುಂದರೇಶ್, ಆರ್.ಪ್ರಸನ್ನಕುಮಾರ್, ಕಲಗೋಡು ರತ್ನಾಕರ್, ಡಿ.ಮಂಜುನಾಥ, ಗುರುದತ್ ಹೆಗಡೆ, ಜಿ.ಕೆ.ಮಿಥುನ್‌ಕುಮಾರ್, ಎನ್.ಹೇಮಂತ್, ಸಿದ್ದಲಿಂಗ ರೆಡ್ಡಿ, ಮಲ್ಲೇಶಪ್ಪ, ಡಾ. ಕವಿತಾ ಯೋಗಪ್ಪನವರ್ ಇದ್ದರು.
Published on

ಶಿವಮೊಗ್ಗ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತ್ವತ್ವದ ಭದ್ರ ಬುನಾದಿ ಮೇಲೆ ನಿಂತಿರುವ ಪ್ರಜಾಪ್ರಭುತ್ವದ ಮಹತ್ವ ತಿಳಿಸಿಕೊಡುವ ಉದ್ದೇಶದಿಂದ ಮೊದಲ ಬಾರಿಗೆ ಬೀದರ್‌ನಿಂದ ಚಾಮರಾಜನಗರದವರೆಗೆ ಹಮ್ಮಿಕೊಂಡಿದ್ದ ಮಾನವ ಸರಪಳಿ ರಚನೆಗೆ ಭಾನುವಾರ ಶಿವಮೊಗ್ಗದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಶಾಲಾ ಕಾಲೇಜುಗಳ ಸಾವಿರಾರು ಮಕ್ಕಳು, ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ಮತ್ತು ಸಾರ್ವಜನಿಕರು ಸುಮಾರು 60 ಕಿ.ಮೀವರೆಗೆ ಮಾನವ ಸರಪಳಿ ನಿರ್ಮಿಸಿ ದಾಖಲೆ ಬರೆದರು.

ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್, ಅರಣ್ಯ, ಶಿಕ್ಷಣ, ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಮತ್ತಿತರ ಇಲಾಖೆಗಳ ಆಶ್ರಯದಲ್ಲಿ ಮಾನವ ಸರಪಳಿ ರಚನೆ ಮಾಡಿ ವಿಶಿಷ್ಟವಾಗಿ ಪ್ರಜಾಪ್ರಭುತ್ವ ದಿನ ಆಚರಿಸಲಾಯಿತು.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಬಗ್ಗೆ ನಾಗರಿಕರಿಗೆ ಅರಿವು ಮೂಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ಆದೇಶದ ಮೇರೆಗೆ ಭದ್ರಾವತಿ ತಾಲೂಕಿನ ಕಾರೇಹಳ್ಳಿಯಿಂದ ಶಿವಮೊಗ್ಗ ತಾಲೂಕಿನ ಮಡಕೆಚೀಲೂರುವರೆಗೆ ಶಿವಮೊಗ್ಗ ಹಾಗೂ ಭದ್ರಾವತಿ ತಾಲೂಕಿನ ಶಾಲಾ ಕಾಲೇಜು, ಹಾಸ್ಟೆಲ್ ವಿದ್ಯಾರ್ಥಿಗಳು, ಗ್ರಾಪಂ ಹಾಗೂ ಸ್ವಸಹಾಯ ಗುಂಪುಗಳ ಪ್ರತಿನಿಧಿಗಳು, ಸರ್ಕಾರಿ ನೌಕರರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡು ಒಬ್ಬರಿಗೊಬ್ಬರು ಕೈ-ಕೈ ಜೋಡಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಡಿಸಿ ಕಚೇರಿ ಸಹಾಯಕ ಅಧಿಕಾರಿ ಪ್ರದೀಪ್ ನಿಕ್ಕಂ ಸಂವಿಧಾನ ಪೀಠಿಕೆ ಬೋಧಿಸಿದರು. ಶಾಸಕ ಎಸ್.ಎನ್.ಚನ್ನಬಸಪ್ಪ, ಎಂಎಲ್ಸಿ ಬಲ್ಕಿಷ್ ಬಾನು, ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಡಿಸಿ ಗುರುದತ್ ಹೆಗಡೆ, ಎಸ್‌ಪಿ ಜಿ.ಕೆ.ಮಿಥುನ್‌ಕುಮಾರ್, ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ.ಮಂಜುನಾಥ, ಜಿಪಂ ಸಿಇಒ ಎನ್.ಹೇಮಂತ್, ಎಡಿಸಿ ಸಿದ್ದಲಿಂಗ ರೆಡ್ಡಿ, ಸಮಾಜ ಇಲಾಖೆ ಉಪನಿರ್ದೇಶಕ ಮಲ್ಲೇಶಪ್ಪ, ಪಾಲಿಕೆ ಆಯುಕ್ತೆ ಡಾ. ಕವಿತಾ ಯೋಗಪ್ಪನವರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net