4 ತಿಂಗಳಲ್ಲಿ 61 ವ್ಹೀಲಿಂಗ್ ಕೇಸ್

Bike Wheeling (1)
Published on

ಬೆಂಗಳೂರು: ದ್ವಿಚಕ್ರ ವಾಹನ ವ್ಹೀಲಿಂಗ್ ಮಾಡುತ್ತಿದ್ದ 61 ಸವಾರರನ್ನು ಪತ್ತೆಹಚ್ಚಿರುವ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು 51 ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಜ. 1ರಿಂದ ಈವರೆಗೂ ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ್ದು, ತಪ್ಪಿತಸ್ಥರಿಗೆ ನ್ಯಾಯಾಲಯ 3.19 ಲಕ್ಷ ರೂ. ದಂಡ ವಿಧಿಸಿದೆ.

ಸಂಚಾರ ನಿಯಮ ಉಲ್ಲಂಸಿದ ಆರೋಪದ ಮೇಲೆ 42,200 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿ ಅನಿತಾ ಬಿ. ಹದ್ದಣ್ಣನವರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net