684 ಹುದ್ದೆವಾರು ಪರಿಷ್ಕೃತ ಅಂಕ ಪಟ್ಟಿ ಪ್ರಕಟ

JOb
Published on

ಬೆಂಗಳೂರು: ಕಿಯೋನಿಕ್ಸ್​, ಎಂಎಸ್​ಐಎಲ್​ ಸೇರಿದಂತೆ ಐದು ನಿಗಮ ಮಂಡಳಿಗಳ ವಿವಿಧ ವೃಂದದ 684 ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ 6,18,148 ಅಭ್ಯರ್ಥಿಗಳು ಪಡೆದ ಅಂಕಗಳ ಹುದ್ದೆವಾರು ಪರಿಷತ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಬಿಡುಗಡೆ ಮಾಡಿದೆ.

ಏ.22ರಂದು ಪ್ರಕಟಿಸಿದ್ದ ತಾತ್ಕಾಲಿಕ ಅಂಕ ಪಟ್ಟಿಗೆ ಬಂದ ಆೇಪಣೆಗಳನ್ನು ಪರಿಶೀಲಿಸಿದ ನಂತರ ಈ ಪರಿಷತ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್​.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (386), ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (186), ಎಂಎಸ್​ಐಎಲ್​ (72), ಕಿಯೋನಿಕ್ಸ್​ (26), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ (14) ವಿವಿಧ ವೃಂದದ ಒಟ್ಟು 684 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net