ಮೇಣದಬತ್ತಿ ಫ್ಯಾಕ್ಟರಿಯಲ್ಲಿ ಸ್ಫೋಟ: 7 ಮಂದಿ ಸಾವು

Fire
Published on

ಘಾಜಿಯಾಬಾದ್​: ಇಲ್ಲಿನ ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಉಂಟಾದ ಸ್ಫೋಟದಿಂದ ಏಳು ಮಂದಿ ಮೃತಪಟ್ಟಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.

ಮೋದಿ ನಗರದಲ್ಲಿರುವ ಮೇಣದ ಬತ್ತಿ ಫ್ಯಾಕ್ಟರಿಯಲ್ಲಿ ಮಧ್ಯಾಹ್ನ 3ಗಂಟೆಯ ಹೊತ್ತಿದೆ ಸ್ಫೋಟ ಆಗಿದೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಹಾಗೇ ಫ್ಯಾಕ್ಟರಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿ, ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ. ಗಾಯಾಳುಗಳನ್ನೆಲ್ಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಆಗಸ್ಟ್​ 15ಕ್ಕೆ ಬರುವುದಿಲ್ಲ ಕೊವ್ಯಾಕ್ಸಿನ್​, ಅದಕ್ಕಾಗಿ 2021ರವರೆಗೆ ಕಾಯಿರಿ ಎಂದ ಕೇಂದ್ರ ಸರ್ಕಾರ

ಫ್ಯಾಕ್ಟರಿ ದುರಂತದ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಘಾಜಿಯಾಬಾದ್​ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿದ್ದಾರೆ. ಸ್ಫೋಟಕ್ಕೆ ಕಾರಣವೇನು ಎಂಬುದನ್ನು ತನಿಖೆ ನಡೆಸಲು ಸೂಚನೆ ನೀಡಿದ್ದಾರೆ. ದುರಂತದಲ್ಲಿ ಸಾವನ್ನಪ್ಪಿದವರ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net