ಟ್ರಕ್‌ಗೆ ಬಸ್ ಡಿಕ್ಕಿ ; 7 ಜನ ಮೃತ್ಯು, 40 ಮಂದಿಗೆ ಗಂಭೀರ ಗಾಯ!

7 end life 40 Injured After Bus Collides With Truck On Lucknow Gorakhpur Highway
Published on

ಅಯೋಧ್ಯೆ: ಲಕ್ನೋ-ಗೋರಖ್‌ಪುರ ಹೆದ್ದಾರಿಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದು 7 ಸಾವು, 40 ಮಂದಿ ಗಾಯಗೊಂಡಿದ್ದಾರೆ.

ಲಕ್ನೋ-ಗೋರಖ್‌ಪುರ ಹೆದ್ದಾರಿಯಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದ ನಂತರ ಬಸ್‌ ಪಕ್ಕಕ್ಕೆ ಉರುಳಿ ಏಳು ಪ್ರಯಾಣಿಕರು ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಲಖನೌ-ಗೋರಖ್‌ಪುರ ಹೆದ್ದಾರಿಯಲ್ಲಿ ನಡೆದಿದೆ.

ಎದುರಿನಿಂದ ಬರುತ್ತಿದ್ದ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಎದುರಿನಿಂದ ಬರುತ್ತಿದ್ದ ಟ್ರಕ್ ಬಿದ್ದು ಬಸ್ ಅದರಡಿಯಲ್ಲಿ ಹೂತು ಹೋಗಿದೆ. ಸಂಜೆ ಅಯೋಧ್ಯೆಯಿಂದ ಬರುತ್ತಿದ್ದ ಖಾಸಗಿ ಬಸ್ ಅಂಬೇಡ್ಕರ್ ನಗರಕ್ಕೆ ತೆರಳಲು ಹೆದ್ದಾರಿಯಲ್ಲಿ ತಿರುವು ಪಡೆಯುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತ ಸಂಭವಿಸಿದ ಕೂಡಲೇ ಜಿಲ್ಲಾಡಳಿತ ಕಾರ್ಯಾಚರಣೆ ನಡೆಸಿ ರಕ್ಷಣಾ ಕಾರ್ಯ ಆರಂಭಿಸಿದೆ. ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿದೆ. ಅಪಘಾತಕ್ಕೀಡಾದ ವಾಹನದಲ್ಲಿ ಸಿಲುಕಿರುವವರನ್ನು ಸ್ಥಳಾಂತರಿಸುತ್ತಿದ್ದೇವೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಗುತ್ತಿದೆ. ರಸ್ತೆ ಅಪಘಾತದಲ್ಲಿ ಇಲ್ಲಿಯವರೆಗೆ ಏಳು ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೀಶ್ ಕುಮಾರ್ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net