

ರಾಯ್ಪುರ: ಛತ್ತೀಸ್ಗಢದ ರಾಯ್ಪುರ ಸಮೀಪ ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಕಾರ್ಮಿಕರು ಮೃತಪಟ್ಟಿದ್ದಾರೆ. ಟ್ರಕ್ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದ್ದು, ಹಲವರು ಗಾಯಗೊಂಡಿದ್ದಾರೆ.
ಕಾರ್ಮಿಕರನ್ನು ಒಡಿಶಾದ ಗಂಜಾಂನಿಂದ ಗುಜರಾತ್ನ ಸೂರತ್ಗೆ ಕರೆದೊಯ್ಯುತ್ತಿದ್ದ ಬಸ್ ಮತ್ತು ಟ್ರಕ್ ರಾಯ್ಪುರ ಸಮೀಪ ಚೇರಿ ಖೇಡಿ ಎಂಬಲ್ಲಿ ಮುಖಾಮುಖಿ ಢಿಕ್ಕಿಯಾಗಿವೆ. ಏಳು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಏಳು ಕಾರ್ಮಿಕರು ಗಂಭೀರಗಾಯಗೊಂಡಿದ್ದು ಅವರನ್ನು ಸೇರಿಸಿ ಉಳಿದ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತಕ್ಕೆ ಕಾರಣವೇನು ಮತ್ತು ಇತರೆ ಮಾಹಿತಿಗಳನ್ನು ಇನ್ನಷ್ಟೇ ಸಿಗಬೇಕಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣದ ದಾಖಲಿಸಿದ್ದು, ತನಿಖೆ ಮುಂದುವರಿಸಿದ್ದಾರೆ. (ಏಜೆನ್ಸೀಸ್)