ರಾಜ್ಯದಲ್ಲಿ 7 ಸಾವಿರಕ್ಕೂ ಅಧಿಕ ಡೆಂಗೆ ಪ್ರಕರಣಮುಂಜಾಗ್ರತಾ ಕ್ರಮಕ್ಕೆ ಸಿಎಂ ಸೂಚನೆ

siddaramaiah-4951
Published on

ಬೆಂಗಳೂರು: ರಾಜ್ಯದಲ್ಲಿ  ಕೆಲವು ದಿನಗಳ ಅವಧಿಯಲ್ಲಿ ಡೆಂಗೆ ಪ್ರಕರಣಗಳು ಹೆಚ್ಚುತ್ತಲೇ ಇವೆ. ಸುಮಾರು 7 ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿವೆ.‌ ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ!

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಉನ್ನತ ಅಧಿಕಾರಿಗಳ ಸಭೆ ನಡೆಸಿ

ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಡೆಂಗೆ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ, ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ.

ಬೆಂಗಳೂರಿನಲ್ಲಿ ಔಷಧ ಸಿಂಪಡಣೆ

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಔಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಚಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಸ್ವಚ್ಚತೆಗೆ ಆದ್ಯತೆ ನೀಡಿ

ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಿ, ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಡೆಂಘಿ ಬಗ್ಗೆ ಭಯ ಬೇಡ, ಜಾಗೃತೆಯಿರಲಿ ಎಚ್ಚರಿಕೆ ಸಂದೇಶವನ್ನೂ ಸಿಎಂ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net