7 ರಿಂದ ದುರ್ಗದಲ್ಲಿ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

ctd--000002...
Published on

ಚಿತ್ರದುರ್ಗ: ನಗರದ ಮುರುಘಾ ಮಠದ ಅನುಭವ ಮಂಟಪದಲ್ಲಿ ಫೆ. 7 ರಿಂದ 2 ದಿನಗಳ ಕಾಲ 2024-25 ನೇ ಸಾಲಿನ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಆಯೋಜಿಸಲಾಗುತ್ತಿದೆ ಎಂದು ಡಿಸಿ ಟಿ.ವೆಂಕಟೇಶ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, 2007 ರಲ್ಲಿ ನಮ್ಮ ಜಿಲ್ಲೆಯಲ್ಲಿ ರಾಜ್ಯಮಟ್ಟದಲ್ಲಿ ಈ ಸ್ಪರ್ಧೆಗಳ ಜರುಗಿದ್ದು, ಮತ್ತೆ ಈ ಅವಕಾಶ ಒದಗಿದೆ. 35 ಶೈಕ್ಷಣಿಕ ಜಿಲ್ಲೆಗಳಿಂದ 1378 ವಿದ್ಯಾರ್ಥಿಗಳು, 105ಕ್ಕೂ ಹೆಚ್ಚು ನೋಡಲ್ ಅಧಿಕಾರಿಗಳು, ಮಾರ್ಗದರ್ಶಿ ಶಿಕ್ಷಕರು ಭಾಗವಹಿಸಲಿದ್ದಾರೆ ಎಂದರು.

ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ವಿದ್ಯಾರ್ಥಿಗಳಿಗೆ ನಗರದ ಕೆಎಸ್‌ಆರ್‌ಟಿ ಬಸ್ ನಿಲ್ದಾಣದಲ್ಲಿ ಮಾಹಿತಿ ಕೇಂದ್ರ ತೆರೆಯಬೇಕು. 5 ಜಿಲ್ಲೆಗಳಿಗೆ ಒಬ್ಬ ಕ್ಷೇತ್ರ ಶಿಕ್ಷಣಾಧಿಕಾರಿ ನೇಮಿಸಿ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕು. ಪ್ರತಿ 2 ಜಿಲ್ಲೆಗಳಿಗೆ ಒಂದು ನೋಂದಣಿ ಕೌಂಟರ್ ತೆರೆಯಬೇಕು. ವಿದ್ಯಾರ್ಥಿಗಳನ್ನು ಕರೆ ತರಲು ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅನುಭವ ಮಂಟಪದ ಬಳಿ ತಾತ್ಕಾಲಿಕ ಆರೋಗ್ಯ ಕೇಂದ್ರ ಸ್ಥಾಪಿಸಬೇಕು. ಇಬ್ಬರು ವೈದ್ಯರು ಸೇರಿದಂತೆ ಅಗತ್ಯ ವೈದ್ಯಕೀಯ ಸಿಬ್ಬಂ ದಿ, ಔಷಧೋಪಚಾರ, ಆಂಬುಲೆನ್ಸ್ ಲಭ್ಯವಿರಬೇಕು. ಮಕ್ಕಳಿಗೆ ಕುಡಿಯಲು ಶುದ್ಧ ಕುಡಿಯುವ ನೀರು ನೀಡಬೇಕು. ಪರೀಕ್ಷಿಸಿದ ನಂತ ರವೇ ಮಕ್ಕಳಿಗೆ ಆಹಾರ ವಿತರಿಸಬೇಕು.

ಪ್ರತಿ ಸ್ಪರ್ಧೆಗಳಿಗೂ ಅನುಭವಿ ತೀರ್ಪುಗಾರರಿದ್ದು, ನಿಷ್ಪಕ್ಷಪಾತ ತೀರ್ಪು ನೀಡಬೇಕು. ಸೂಕ್ತ ಪೊಲೀಸ್ ಬಂದೋಬಸ್ತ್ ಇರಬೇಕು. ವಿದ್ಯಾರ್ಥಿಗಳಿಗೆ ಜಿಲ್ಲೆ ಐತಿಹಾಸಿಕ ಮಹತ್ವ ತಿಳಿಸಲು ಬ್ರೋಚರ್, ಬ್ಯಾನರ್‌ಗಳನ್ನು ಸ್ಪರ್ಧೆ ಸ್ಥಳದಲ್ಲಿ ಅಳವಡಿಸಬೇಕು. ಆಯ್ದ ವಿದ್ಯಾರ್ಥಿಗಳಿಗೆ ಐತಿಹಾಸಿಕ ಸ್ಥಳಗಳಿಗೆ ಪ್ರವಾಸ ಏರ್ಪಡಿಸಬೇಕೆಂದು ಡಿಸಿ ಹೇಳಿದರು.

ಜಿಪಂ ಸಿಇಒ ಎಸ್.ಜೆ.ಸೋಮಶೇಖರ್, ಎಡಿಸಿ ಬಿ.ಟಿ.ಕುಮಾರಸ್ವಾಮಿ, ಡಿಡಿಪಿಐ ಎಂ.ಆರ್.ಮಂಜುನಾಥ್, ಪಿಯು ಉಪ ನಿರ್ದೇಶಕ ಪುಟ್ಟಸ್ವಾಮಿ, ಡಿಎಚ್‌ಒ ಡಾ.ರೇಣುಪ್ರಸಾದ್ ಮತ್ತಿತರರು ಇದ್ದರು.

---

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net