ವಲಸಿಗರನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತ: 71 ಮಂದಿ ಸಾವು..bus carrying migrants crashes

catches fire in Afghanistan
Published on

bus carrying migrants crashes :   ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಂಕಿಗಾಹುತಿಯಾಗಿದ್ದು, ಘಟನೆಯಲ್ಲಿ 71 ಮಂದಿ ಸುಟ್ಟು ಕರಕಲಾಗಿದ್ದಾರೆ. ಅಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ  ಈ ಘಟನೆ ನಡೆದಿದೆ.

 ಪ್ರಯಾಣಿಕರ ಬನ್ನೊಂದು ಟ್ರಕ್ ಮತ್ತು ಬೈಕ್‌ಗೆ ಡಿಕ್ಕಿ ಹೊಡೆದ ನಂತರ ಬೆಂಕಿ ಹೊತ್ತಿಕೊಂಡಿತ್ತು. ನೋಡ ನೋಡುತ್ತಲೇ ಜನರು ಸುಟ್ಟು ಕರಕಲಾಗಿದ್ದಾರೆ. 17 ಮಕ್ಕಳು ಸೇರಿದಂತೆ ಕನಿಷ್ಠ 71 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಸ್‌ ಇರಾನ್‌ನಿಂದ ಗಡಿಪಾರು ಮಾಡಲಾದ ಆಫ್ಘನ್ನರನ್ನು ಹೊತ್ತೊಯ್ಯುತ್ತಿತ್ತು ಮತ್ತು ಗಡಿ ದಾಟಿದ ನಂತರ ಕಾಬೂಲ್ ಕಡೆಗೆ ಪ್ರಯಾಣಿಸುತ್ತಿತ್ತು ಎಂದು ಪ್ರಾಂತೀಯ ಅಧಿಕಾರಿ ಮೊಹಮ್ಮದ್ ಯೂಸುಫ್ ಸಯೀದಿ ಎಎಫ್‌ಪಿಗೆ ತಿಳಿಸಿದ್ದಾರೆ.

ಬಸ್ ಇರಾನ್‌ನಿಂದ ಗಡೀಪಾರು ಮಾಡಲಾದ ಆಫ್ಘನ್ನರನ್ನು ಹೊತ್ತೊಯ್ಯುತ್ತಿತ್ತು ಮತ್ತು ಗಡಿ ದಾಟಿದ ನಂತರ ಕಾಬೂಲ್ ಕಡೆಗೆ ಪ್ರಯಾಣಿಸುತ್ತಿತ್ತು ಎಂದು ಪ್ರಾಂತೀಯ ಅಧಿಕಾರಿ ಮೊಹಮ್ಮದ್ ಯೂಸುಫ್ ಸಯೀದಿ ಎಎಫ್‌ಪಿಗೆ ತಿಳಿಸಿದರು. "ಎಲ್ಲಾ ಪ್ರಯಾಣಿಕರು ಇಸ್ಲಾಂ ಖಲಾದಲ್ಲಿ ವಾಹನವನ್ನು ಹತ್ತಿದ ವಲಸಿಗರು" ಎಂದು ಇರಾನ್‌ಗೆ ಹೋಗುವ ಪ್ರಮುಖ ಕ್ರಾಸಿಂಗ್ ಪಾಯಿಂಟ್ ಅನ್ನು ಉಲ್ಲೇಖಿಸಿ ಸಯೀದಿ ಹೇಳಿದರು.

ಹೆರಾತ್ ಪ್ರಾಂತ್ಯದ ಪೊಲೀಸರು ಈ ಅಪಘಾತಕ್ಕೆ ಬಸ್ಸಿನ ಅತಿವೇಗ ಮತ್ತು ನಿರ್ಲಕ್ಷ್ಯವೇ ಕಾರಣ ಎಂದು ಹೇಳಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಸಂಚಾರ ಅಪಘಾತಗಳು ಸಾಮಾನ್ಯ. ದಶಕಗಳ ಸಂಘರ್ಷ, ಕೆಟ್ಟ ರಸ್ತೆಗಳು, ಹೆದ್ದಾರಿಗಳಲ್ಲಿ ಅಪಾಯಕಾರಿ ಚಾಲನೆ ಮತ್ತು ನಿಯಮಗಳನ್ನು ನಿರ್ಲಕ್ಷಿಸುವುದು ಸೇರಿದಂತೆ ರಸ್ತೆ ಅಪಘಾತಗಳಿಗೆ ಹಲವು ಕಾರಣಗಳಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net