

ಬೆಂಗಳೂರು: ಮದ್ಯ ಸೇವಿಸಿ ವಾಹನ ಚಲಾಯಿಸುವವರ ವಿರುದ್ಧ ಸಂಚಾರ ಪೊಲೀಸರು 9 ದಿನಗಳ ಕಾಲ ವಿಶೇಷ ಕಾರ್ಯಾಚರಣೆ ನಡೆಸಿ 717 ಸವಾರ/ಚಾಲಕರ ವಿರುದ್ಧ ಕೇಸ್ ದಾಖಲಿಸಿದ್ದಾರೆ.
ಸಿಲಿಕಾನ್ ಸಿಟಿಯಲ್ಲಿ ಅಪಘಾತ ತಡೆಯಲು ಮತ್ತು ಅಮಾಯಕರ ಪ್ರಾಣಯಾನಿಯನ್ನು ತಪ್ಪಿಸಲು ಡಿ.21ರಿಂದ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಇಲ್ಲಿಯವರೆಗೂ 27,280ಕ್ಕೂ ಅಧಿಕ ವಾಹನಗಳ ಚಾಲಕ/ಸವಾರರನ್ನು ತಪಾಸಣೆ ನಡೆಸಿದ್ದು, 717 ಮಂದಿ ಮದ್ಯ ಸೇವನೆ ಮಾಡಿರುವುದು ದೃಢವಾಗಿದೆ. ಇವರ ವಿರುದ್ಧ ಐಎಂವಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ವಾಹನ ಜಪ್ತಿ ಮಾಡಿ ಕೋರ್ಟ್‌ಗೆ ಸಲ್ಲಿಸಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.