ರಾಜ್ಯದಲ್ಲಿ ಸಕ್ರಿಯ ಕರೊನಾ ಪ್ರಕರಣಗಳು 75,068: ಇಂದು 93 ಮಂದಿ ಸಾವು

covid19 20 June 20
Published on

ಬೆಂಗಳೂರು: ರಾಜ್ಯದಲ್ಲಿ ಕೊವಿಡ್​-19 ಸೋಂಕಿತರ ಸಂಖ್ಯೆ ಇಂದು 1,58,254ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 6805 ಹೊಸ ಕರೊನಾ ಪ್ರಕರಣಗಳು ಪತ್ತೆಯಾಗಿವೆ ಮತ್ತು 5602 ಮಂದಿ ಡಿಸ್​​ಚಾರ್ಜ್​ ಆಗಿದ್ದಾರೆ. 93 ಸೋಂಕಿತರು ಸಾವನ್ನಪ್ಪಿದ್ದಾರೆ.

ಕೊವಿಡ್​-19 ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರೂ ಇನ್ನೊಂದೆಡೆ ಒಂದು ದಿನದಲ್ಲಿ ಆಸ್ಪತ್ರೆಯಿಂದ ಡಿಸ್​ಚಾರ್ಜ್ ಆಗುತ್ತಿರುವವರ ಪ್ರಮಾಣ ಕೂಡ ಜಾಸ್ತಿಯಾಗುತ್ತಿದೆ. ಇಂದಿನವರೆಗೆ ಒಟ್ಟು 80,281 ಮಂದಿ ಗುಣಮುಖರಾಗಿದ್ದಾರೆ. 2897 ಜನರು ಸಾವನ್ನಪ್ಪಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳು 75,068. 671 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net